ಬಳ್ಳಾರಿ / ಕಂಪ್ಲಿ : ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಂಪ್ಲಿ ಮಂಡಲದ ಎಸ್. ಸಿ. ಮೋರ್ಚಾದ ಅಧ್ಯಕ್ಷರನ್ನಾಗಿ ಸಿ. ಎ. ಚನ್ನಪ್ಪ ನೇಮಕ ರವರನ್ನು ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಲಾಯಿತು. ಪಕ್ಷದ ಶಿಸ್ತು, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಮತ್ತು ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು, ಮುಂದಿನ ವರ್ಷದ ಅವಧಿಯಲ್ಲಿ ಪಕ್ಷದ ಸಂಘಟಣೆಯತ್ತ ಹೆಚ್ಚಿನ ಗಮನಹರಿಸಿ ಕಾರ್ಯಕರ್ತರಿಗೆ, ಸ್ಪೂರ್ತಿಯಾಗಿ, ಶಕ್ತಿಯಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಒಳಿತಿಗಾಗಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಮತ್ತು ಅವಧಿಯಲ್ಲಿ ಪಕ್ಷದ ಸಂಘಟನೆಯನ್ನು ಸದೃಢವಾಗಿ ಮತ್ತು ಅತ್ಯಂತ ಬಲಿಷ್ಠವಾಗಿ ಕಟ್ಟಲು ನಿಮ್ಮ ಪರಿಶ್ರಮ ಹಾಗೂ ಸಮಯ ಅತ್ಯವಶ್ಯವಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ನೂತನ ಕಂಪ್ಲಿ ಮಂಡಲದ ಎಸ್. ಸಿ. ಮೋರ್ಚಾದ ಅಧ್ಯಕ್ಷ ಸಿ. ಎ. ಚನ್ನಪ್ಪ ನೇಮಕ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿ, ಮಾಜಿ ಸಚಿವರಾದ ಬಿ ಶ್ರೀರಾಮುಲು, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಜನಾರ್ಧನ ರೆಡ್ಡಿ, ಮಾಜಿ ಶಾಸಕ ಸುರೇಶಬಾಬು, ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಹಾಗೂ ಎಲ್ಲ ಹಿರಿಯ ಮುಖಂಡರಿಗೂ ಅವರು ನಮ್ಮನ್ನು ಗುರುತಿಸಿ, ಕಂಪ್ಲಿ ಮಂಡಲ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿರುವುದಕ್ಕೆ ತುಂಬು ಹೃದಯದ ಕೃತಜ್ಞತೆಗಳನ್ನು ತಿಳಿಸಿದರು .
ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *