ರಾಯಚೂರು ಜೂನ್ 17 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ದೇವದುರ್ಗ ಹಾಗೂ ಮಸ್ಕಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಿಸುವುದು ಹಾಗೂ ಸಾರ್ವಜನಿಕವಾಗಿ ಮೆರವಣಿಗೆ ಮಾಡುವುದನ್ನು ಕರ್ನಾಟಕ ಪೋಲೀಸ್ ಕಾಯ್ದೆ 1963ರ ಕಲಂ 35ರನ್ವಯ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಪೂವಿತಾ ಎಸ್. ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಣಿವಾರ, ಉಪ್ಪಳ, ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ನಿಡಿಗೊಳ-ತಿಡಿಗೋಳ, ಹತ್ತಿಗುಡ್ಡ, ಕುರಕುಂದಾ, ಚಿಕ್ಕಬೇರ್ಗಿ, ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಬಳ್ (ಯು), ರಾಗಲಪರ್ವಿ, ಮಾನವಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿಹಾಳ, ಜಾನೇಕಲ್, ಮದ್ಲಾಪೂರು, ಜಾಗೀರ ಪನ್ನೂರು, ಮಲ್ಲಿನ ಮಡಗು, ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿರವಾರ ಪಟ್ಟಣ, ಕಡದಿನ್ನಿ, ಬೊಮ್ಮನಾಳ, ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯ ಕವಿತಾಳ ಪಟ್ಟಣ, ಹಿರೆಬಾದರದಿನ್ನಿ, ಬಾಗಲವಾಡ, ಅಮೀನಗಡ, ಗೂಗೆಬಾಳ, ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ತಲೇಖಾನ್, ಸಂತೆಕಲ್ಲೂರು, ಮುಸಲಿ ಕಾರಲಕುಂಟೆ, ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಡಿ, ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾನಾಪೂರು, ಬುದ್ದಿನ್ನಿ, ರಾಮದುರ್ಗ, ಹಿರೇಬೂದೂರು ಸೇರಿದಂತೆ ಒಟ್ಟು 29 ಗ್ರಾಮಗಳಲ್ಲಿ ಸಾರ್ವಜನಿಕರ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿನಾಂಕ:17-06-2026 ರಿಂದ 26-06-2026ರವರೆಗೆ ಆಚರಿಸಲಿರುವ ಮೋಹರಂ ಹಬ್ಬವನ್ನು ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಿಸುವುದು ಹಾಗೂ ಈ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆಯನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಪೂವಿತಾ ಎಸ್. ಅವರು ಆದೇಶದಲ್ಲಿ ತಿಳಿಸಿದ್ದಾರೆ.

