ಮಸ್ಕಿ: ಪೋಲಿಯೊ ರೋಗದಿಂದ ರಕ್ಷಿಸುವ ಸಲುವಾಗಿ 5 ವರ್ಷದೊಳಗಿನ ಪ್ರತಿಯೊಂದು ಮಗುವಿದೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬನಸಗೌಡ ತುರವಿಹಾಳ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ನಂತರ ಮಾತನಾಡಿದ ಅವರು ಪೋಲಿಯೋ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು.
ಮಗುವಿಗೆ ಈ ಹಿಂದೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಸುರಕ್ಷತೆಯ ದೃಷ್ಟಿಯಿಂದ ಈ ಹೆಚ್ಚುವರಿ ಹನಿಗಳನ್ನು ಹಾಕಿಸಿ ಎಂದು ಮನವಿ ಮಾಡಿದರು. ಪೋಲಿಯೊ ಮುಕ್ತ ಭಾರತವನ್ನು ಕಾಪಾಡಿಕೊಳ್ಳುವುದು ಮತ್ತು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿಸಿ. ಸಮೀಪದ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ವಿಶೇಷ ಬೂತ್‌ಗಳಲ್ಲಿ ಲಸಿಕೆ ಹಾಕಲಾಹುತ್ತದೆ. ಇದರ ಜತೆಗೆ ಸಂಚಾರಿ ತಂಡಗಳು ಮತ್ತು ಮನೆ-ಮನೆ ಭೇಟಿಯ ಮೂಲಕ ಲಸಿಕೆ ಹಾಕಲಾಗುತ್ತದೆ ಆದ್ದರಿಂದ ಪೋಷಕರು ಪ್ರತಿಯೊಬ್ಬ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ತಹಸಿಲ್ದಾರ್ ಮಂಜುನಾಥ ಭೋಗಾವತಿ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇನ್ನಿತರ ಮುಖಂಡರಿದ್ದರು.
ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಅಗತ್ಯಕ್ರಮ – ಶಾಸಕ ಬಸನಗೌಡ ತುರ್ವಿಹಾಳ
ಮಸ್ಕಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿ ಹಲವು ತಿಂಗಳು ಗತಿಸಿವೆ. ಆದರೆ ಜಾಗದ ಸಮಸ್ಯೆಯಿಂದ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಸಮಸ್ಯೆ ಉಂಟಾಗಿತ್ತು ಆದಷ್ಟು ಬೇಗ ಎಲ್ಲವನ್ನು ಸರಿಪಡಿಸಿ ಮೂರು ಕೋಟಿ ವೆಚ್ಚದಲ್ಲಿ ಕಾಮಗಾರಿ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಸ್ಕಿ ಪಟ್ಟಣದಲ್ಲಿ ಸುಸಜ್ಜಿತವಾದ ಆಸ್ಪತ್ರೆಯನ್ನು ನಿರ್ಮಿಸಿ ಬಡ ರೋಗಿಗಳಿಗೆ ಅನುಕೂಲ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.

