ಮಾನ್ವಿ -: ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್‌ನ ಪಿಡಬ್ಲೂಡಿ ಕಚೇರಿ ಮುಂಭಾಗದ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ರಾಜ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕ ರಾಜ, ಹೆದ್ದಾರಿ ಪಕ್ಕದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ, ಅಮರೇಶ್ವರ ಕ್ಯಾಂಪ್ ಕಡೆಯಿಂದ ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಮಾರಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಬದಿ ಸವಾರ ನಂದೀಶ್ ಗಾಯಗೊಂಡಿದ್ದು ಮಾನ್ವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಘಟನೆ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *