ನೈಜ್ಯ ದೆಸೆ : ಲಿಂಗಸಗೂರು : ಜು 7 -ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಹಾಗೂ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಿ.ಎಸ್.ಹೂಲಗೇರಿ ರವರ ನೇತೃತ್ವದಲ್ಲಿ ಪಟ್ಟಣದ ಪುರಸಬೆ ವಾರ್ಡ ನಂಬರ್ 08 , 09 ಹಾಗೂ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕಾರ್ಯದ ಪ್ರಗತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು. ಪ್ರತಿಯೊಂದು ಮನೆಗೂ ಕಡ್ಡಾಯವಾಗಿ ಭೇಟಿ ನೀಡಿ, ಅರ್ಹ ಮತದಾರರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಯಾವುದೇ ಅರ್ಹ ಮತದಾರರು ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ವಂಚಿತರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು BLO ಗಳಿಗೆ ತಿಳಿಸಿದರು ಮತದಾರರ ವಿವರಗಳನ್ನು ಗುಣಮಟ್ಟದೊಂದಿಗೆ ದಾಖಲಿಸಿ,ನಿಗದಿತ ಅವಧಿಯೊಳಗೆ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸುವಂತೆ BLO ಗಳಿಗೆ ತಿಳಿಸಿದರು ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅದ್ಯಕ್ಷರಾದ ಗೋವಿಂದ ನಾಯಕ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಅಪ್ಪಯ್ಯ ನಾಯಕ, ಡಾ.ಶಿವಬಸಪ್ಪ ಹೆಸರೂರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಬಸವರಾಜ ಜೆಲ್ಲಿ, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದ್ ರಪೀ , ಜಿಲ್ಲಾ ಪದವೀಧರ ಕಾಂಗ್ರೆಸ್ ಸಮಿತಿ ಅದ್ಯಕ್ಷ ಸಂಜೀವಪ್ಪ ಚಲುವಾದಿ, ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗಂಗಮ್ಮ ಕಟ್ಟಿಮನಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅದ್ಯಕ್ಷರಾದ ಅಮರೇಶ ಹಿರೇಹೆಸರೂರು, ತಾಲ್ಲೂಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅದ್ಯಕ್ಷರಾದ ವೆಂಕಟೇಶ ಗುತ್ತೆದಾರ, ಯುವ ಕಾಂಗ್ರೆಸ್ ಅದ್ಯಕ್ಷ ಸಂತೋಷ ಸೊಪ್ಪಿಮಠ,
ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗ ಅದ್ಯಕ್ಷ ಖಾಜಾಹುಸೇನ ಪೂಲವಾಲಾ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅದ್ಯಕ್ಷ ಮೌನೇಶ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮಾಜಿ ಪುರಸಭಾ ಸದಸ್ಯರು ಕಾಂಗ್ರೆಸ್ ಪಕ್ಷದ BLA2 ಗಳು ಉಪಸ್ಥಿತಿ ಇದ್ದರು

