ತಾಳಿಕೋಟಿ: ದೇವರ ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ, ಪ್ರೌಢಶಾಲೆಯ ನೂತನ ಕಟ್ಟಡ, ವಸತಿ ನಿಲಯ ಉದ್ಘಾಟನೆ ಹಾಗೂ ‘ಸುವರ್ಣ ಸಂತಸ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ತಾಳಿಕೋಟಿ ಪಟ್ಟಣದ ನಿವೃತ್ತ ಮುಖ್ಯ ಶಿಕ್ಷಕರಾದ ಸಿ.ಎಂ.ಹಿರೇಮಠ ಇವರು ಸ್ಮರಣ ಸಂಚಿಕೆಗೆ ಲೇಖನಗಳನ್ನು ನೀಡಿದ್ದಕ್ಕಾಗಿ ಅವರನ್ನು ಜಾಲಹಳ್ಳಿಯ ಪರಮ ಪೂಜ್ಯರು ಸನ್ಮಾನಿಸಿ ಆಶೀರ್ವಾದ ನೀಡಿ ಅಭಿನಂದನಾ ಪತ್ರ ವಿತರಿಸಿದರು. ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ರಾಜುಗೌಡ ಸಂ.ನಾಡಗೌಡ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಪರಮ ಪೂಜ್ಯರು, ರಾಜಕೀಯ ಮುಖಂಡರು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.

