ತಾಳಿಕೋಟಿ: ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ದೇವರ ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದಲ್ಲಿ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಹೊರ ತಂದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಬಾಳೆಹೊನ್ನೂರ ಪೀಠದ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಾಜುಗೌಡ ನಾಡಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಪರಮ ಪೂಜ್ಯರು, ವಿವಿಧ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *