ರಾಯಚೂರು -: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಸಮಾಜದ ಯಾವುದೇ ಕ್ಷೇತ್ರದಲ್ಲಿ ಅಂದರೆ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ ಪದ್ಮಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆಯ ಆಸಕ್ತರು ತಮ್ಮ ಪ್ರಸ್ತಾವಗಳನ್ನು ಜುಲೈ 14ರೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಯುವ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

