ಕವಿತಾಳ -: ‘ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಮತಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿ ಮಾಡಬೇಕಿದ್ದಲ್ಲಿ ಅಗತ್ಯ ದಾಖಲೆ ನೀಡಿ ಸಹಕರಿಸಬೇಕು’ ಎಂದು ತಹಶೀಲ್ದಾರ್ ಅಶೋಕ ಪವಾರ್ ಹೇಳಿದರು.
ಸಮೀಪದ ಬಾಗಲವಾಡ ಗ್ರಾಮಕ್ಕೆ ಭೇಟಿ ನೀಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಪ್ರಗತಿ ಕುರಿತು ಪರಿಶೀಲನೆ ಮಾಡಿದರು. ಕೆಲವು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಅರ್ಹ ಮತದಾರರು ಮತ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸುವಂತೆ ಬಿಎಲ್‌ಒಗಳಿಗೆ ಸೂಚಿಸಿದರು.
ಉಪತಹಶೀಲ್ದಾರ್ ರಾಜಕುಮಾರ ಸೇರಿದಂತೆ ಕವಿತಾ, ಮಹೇಶ, ಶಾಲೀಮಾ, ಅಂಬಮ್ಮ, ಸರಸ್ವತಿ ಮತ್ತು ಈರಮ್ಮ ಉಪಸ್ಥಿತರಿದ್ದರು.

