ಮಸ್ಕಿ: ಅಖಿಲ ಕರ್ನಾಟಕ ಬಣಗಾರ(ಸಿಂಪಿ) ಸಮಾಜದಿಂದ ಜು.26 ರಂದು ರಾಜ್ಯ ಮಟ್ಟದ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಚಪ್ಪ ಸರಡಗಿ ಕಮತಗಿ ಹೇಳಿದರು.
ಪಟ್ಟಣದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜದ ಮುಂದಿನ ಪೀಳಿಗೆಗೆ ಉಜ್ವಲ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಯ ಮಾದರಿ ಸಮಾಜವನ್ನು ಕೊಡುಗೆಯಾಗಿ ನೀಡುವ ಸಂಕಲ್ಪವನ್ನು ಈ ಸಮಾವೇಶದಲ್ಲಿ ಮಾಡಲಾಗುತ್ತಿದೆ. ಸಂಘಟನೆಯಲ್ಲಿ ಯಶಸ್ಸಿದೆ ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿರುವ ಈ ಸಮಾವೇಶವನ್ನು ಮಸ್ಕಿ ಪಟ್ಟಣದಲ್ಲಿ (ಬಣಗಾರ, ಸಿಂಪಿ, ಸಿಂಪಿಗ, ಚಿಪ್ಪಿಗ, ರಂಗದಾರಿ ಮತ್ತು ನಾಗಲೀಕ ಸಮಾಜ) ಹಾಗೂ ನಾಗಲೀಕ ಸಿಂಪಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಜು.26 ರಂದು ಭಾನುವಾರ ಬೆ.10 ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಪೂಜೆ ಕಾರ್ಯಕ್ರಮವನ್ನು ಮುಗಿಸಿಕೊಂಡು ನಂತರ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಸುಜಾತ ಬುಳ್ಳಾ, ದೊಡ್ಡಪ್ಪ ಬಳ್ಳಾ, ಶ್ರೀಧರ, ಸುರೇಶ ನಾಗಲಿಕರ ಇದ್ದರು.

