ಮಸ್ಕಿ, ಜುಲೈ 10: ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದ ಯುವ ಅಧಿಕಾರಿ ರಂಗಪ್ಪ ಮ್ಯಾಗಳಮನಿ ಅವರು ದೇವದುರ್ಗ ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಗೆ ಗ್ರೇಡ್-2 ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ರಂಗಪ್ಪ ಮ್ಯಾಗಳಮನಿ ಅವರು ಗ್ರಾಮ ಪಂಚಾಯಿತಿ ಇಲಾಖೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಮತ್ತು ಜನಸ್ನೇಹಿ ಸೇವೆಯ ಮೂಲಕ ಉತ್ತಮ ಹೆಸರು ಗಳಿಸಿದ್ದು, ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಸರ್ಕಾರ ಈ ಮುಂಬಡ್ತಿಯನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸ ಹುದ್ದೆಯಲ್ಲಿಯೂ ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಸೇವೆ ಸಲ್ಲಿಸಿ ಇಲಾಖೆಗೆ ಮತ್ತಷ್ಟು ಕೀರ್ತಿ ತಂದುಕೊಡಲಿ ಎಂದು ಶುಭ ಹಾರೈಸಿದರು.ಸನ್ಮಾನ ಸ್ವೀಕರಿಸಿದ ರಂಗಪ್ಪ ಮ್ಯಾಗಳಮನಿ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಗೌರವಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ಹೊಸ ಜವಾಬ್ದಾರಿಯನ್ನು ಇನ್ನಷ್ಟು ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಸೇವಾ ಮನೋಭಾವದಿಂದ ನಿರ್ವಹಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಉಪನ್ಯಾಸಕರಾದ ಲಕ್ಷ್ಮಣ ಕರ್ಲಿ, ಹುಸೇನಬಾಷ, ಲಕ್ಷ್ಮಣ (ಜೆಸ್ಕಾಂ) ಕಡಬೂರು, ಪಾಶಾ ಹಿರೇ ಕಡಬೂರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದು, ಪುಷ್ಪಗುಚ್ಛ ಹಾಗೂ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು.
ಕಾರ್ಯಕ್ರಮವು ಆತ್ಮೀಯ ವಾತಾವರಣದಲ್ಲಿ ನಡೆಯಿತು.

Leave a Reply

Your email address will not be published. Required fields are marked *