ಮಸ್ಕಿ: ತಾಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭ್ರಮರಾಂಬ ದೇವಸ್ಥಾನದಲ್ಲಿ ಜುಲೈ 15ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಣಜಿಗ ಸಮಾಜದ ತಾಲೂಕಾಧ್ಯಕ್ಷ ವೀರೇಶ ಸೌದ್ರಿ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಭ್ರಮರಾಂಬ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ವರರುದ್ರಮುನಿ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ, ಉದ್ಘಾಟಕರಾಗಿ ಗಂಗಾವತಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮುಖ್ಯ ಅತಿಥಿಗಳಾಗಿ ಬಣಜಿಗ ಮಹಾಸಭಾ ರಾಷ್ಟಿçÃಯ ಅಧ್ಯಕ್ಷರು ನಿಯೋಜಿತ ಡಾ. ಶಿವಬಸಪ್ಪ ಹೆಸರೂರು, ಶಾಸಕ ಆರ್.ಬಸನಗೌಡ ತುರವಿಹಾಳ ಮತ್ತು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಇನ್ನಿತರರಿದ್ದರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಸಪ್ಪ ಬ್ಯಾಳಿ, ಬಸವಲಿಂಗ ಶೆಟ್ಟಿ, ಅಮರೇಶ ಬ್ಯಾಳಿ ಇದ್ದರು.

