ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ನವೆಂಬರ್ 14 ರಿಂದ ನವೆಂಬರ್ 20ರವರೆಗೆ ಆಚರಿಸಲ್ಪಡುವ ರಾಷ್ಟೀಯ ಗ್ರಂಥಾಲಯ ಸಪ್ತಾಹವನ್ನು ನಗರದ ನಗರ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು.
ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಕೂಡ ನಡೆಯಿತು.
ಮುಖ್ಯ ಗ್ರಂಥಾಲಯಾಧಿಕಾರಿ ನಿರ್ಮಲಾ ಹೆಚ್ ಹೊಸೂರು ಅವರು ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಗ್ರಂಥಾಲಯದಲ್ಲಿ ಓದುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಮತ್ತು ಮಡ್ಡಿಪೇಟೆಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಭಾವಗೀತೆ, ಜನಪದ ಗೀತೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಬ್ಬಂದಿ ರಾಘವೇಂದ್ರರಾವ್ ಕೆ, ಮರೆಪ್ಪ, ರಾಜಶ್ರೀ ಎಸ್., ಸಣ್ಣ ತಿಮಲಮ್ಮ, ಮಾರ್ತಮ್ಮ, ಪದ್ಮಾವತಿ, ಪಾಂಡುರAಗ, ವಿನೋದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *