ತಾಂಡವಪುರ ನವಂಬರ್ 2 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ದೆಹಲಿಯಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಸುಮಾರು ಹೊತ್ತುಗಳ ಕಾಲ ಮಾತುಕತೆ ನಡೆಸಿ ಸಮಾಲೋಚನೆ ನಡೆಸಿದರು.
ಬೇಟಿ ಬಳಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಪಕ್ಷ ಸಂಘಟನೆ ಮತ್ತು ಇಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮತ್ತು ತಮ್ಮ ಮೇಲೆ ಬಂದಿರುವ ಸ್ಟಿಂಗ ಆಪರೇಷನ್ ವಿಚಾರವನ್ನು ಅವರ ಗಮನಕ್ಕೆ ತರುವ ಮೂಲಕ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ
ಈ ಭೇಟಿ ವೇಳೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವ ಡಾ‌ ಎಸ್.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರಾದ ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಡಾ ಡಿ ತಿಮ್ಮಯ್ಯ, ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ ಶಿವಕುಮಾರ್, ಮಾಜಿ ಸದಸ್ಯ ರಮೇಶ್ ಬಾಬು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ರವರು ಸೇರದಂತೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *