ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೊಸ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪೋಷಕರಿಗೆ ಕರೆ ನೀಡಿದರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ವೆಂಕಟಗಿರಿ ಕಾಲೋನಿ ಹಾಗೂ ನಾಗಣಾಪುರ ಕಾಲೋನಿಯಲ್ಲಿ ಸುಮಾರು 4 ಕೋಟಿ ರೂ ವೆಚ್ಚದ ನೂತನವಾಗಿ ನಿರ್ಮಿಸಿರುವ ಶ್ರೀ ಮಹಾರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಕಟ್ಟಡವನ್ನು ಉದ್ಘಾಟಿಸಿ ಸುನಿಲ್ ಬೋಸ್ ರವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡಿದರೆ ಮುಂದಿನ ವಿಧ್ಯಾರ್ಥಿಗಳು ದೇಶದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ.ಕಾಡಾಂಚಿನ ಗ್ರಾಮಗಳಲ್ಲಿ ಇಂತಹ ಕಟ್ಟಡ ಮುಖ್ಯವಾಗಿದೆ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು. ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಬೇಕು.ದೇಶದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಆಸ್ತಿಗಿಂತ ಶಿಕ್ಷಣ ಕೊಡಿಸಲು ಮುಂದಾಗಬೇಕಿದೆ.ಎಂದು ಹೇಳಿದ ಶಾಸಕರು ಶಿಕ್ಷಣ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಶ್ರಮವಹಿಸುತ್ತಿದ್ದೇವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಗ್ಯಾರಂಟಿ ಸಮಿತಿ ತಾಲ್ಲೂಕು ಅದ್ಯಕ್ಷ ಕೆ ಮಾರುತಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪನೆ ಸಮಿತಿಯ ಮಾಜಿ ಅಧ್ಯಕ್ಷ ಹೆಜ್ಜೆ ಆರ್ ಇಂದನ್ ಬಾಬು ಗುತ್ತಿಗೆದಾರ ರವಿಕುಮಾರ್ ಗೋಪಾಲಕೃಷ್ಣ ತಾಲೂಕು ಕುರುಬ ಸಂಘದ ಮುಖಂಡ ಕೆಂಪಣ್ಣ ಕೆ ಬಿ ಸ್ವಾಮಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜರಾಲ್ಡ್ ರಾಜೇಶ್,ಮುಖಂಡರುಗಳಾದ ಸುಬ್ರಹ್ಮಣ್ಯ, ಮಲ್ಕುಂಡಿ ಪುಟ್ಟಸ್ವಾಮಿ, ಗೋವಿಂದರಾಜು, ತರಗನಹಳ್ಳಿ ನಂಜುಂಡಸ್ವಾಮಿ,ಸೇರಿದಂತೆ ಮುಖಂಡರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರು ಹಾಜರಿದ್ದರು.

Leave a Reply

Your email address will not be published. Required fields are marked *