ತಾಳಿಕೋಟಿ: ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಎಸ್. ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯವು 2026–27ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಗೌರವ ತಂದಿದೆ.
ಸವದತ್ತಿಯ ಶ್ರೀ ಎಸ್.ವಿ.ಎಸ್. ಬೆಳ್ಳುಬ್ಬಿ ಆರ್ಟ್ಸ್ ಆ್ಯಂಡ್ ಕಾಮರ್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ತಂಡವು ಉತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *