ತಾಳಿಕೋಟಿ: ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಎಸ್. ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯದ (ಬಿ.ಪಿ.ಎಡ್) ಪ್ರಥಮ ವರ್ಷದ ವಿದ್ಯಾರ್ಥಿ ತನ್ವೀರ್ ಜಮಾದಾರ ಅವರು 2026–27ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬಾಸ್ಕೆಟ್‌ಬಾಲ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಇತ್ತೀಚೆಗೆ ಬಂಜಾರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ತನ್ವೀರ್ ಜಮಾದಾರ ಅವರು ತಮ್ಮ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿ ವಿಶ್ವವಿದ್ಯಾಲಯ ಮಟ್ಟದ ಬಾಸ್ಕೆಟ್‌ಬಾಲ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಅಭಿನಂದನೆ: ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್. ಪಾಟೀಲ, ಕಾರ್ಯದರ್ಶಿ ಸಚಿನ್ ಎಚ್. ಪಾಟೀಲ, ಆಡಳಿತಾಧಿಕಾರಿ ಕಿರಣ್ ಎಚ್. ಪಾಟೀಲ, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

