ತಾಂಡವಪುರ ನವಂಬರ್ 2 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು
ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಹಾಗೂ ಕಾರ್ಯದರ್ಶಿ ಕೆಕೆ ಮುರಯ್ಯನವರು ತಾಯಿ ಭುವನೇಶ್ವರಿ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ವಂದಿಸಿ ಗೌರವ ಸಲ್ಲಿಸಿದರು
ಗೌರವ ಸಲ್ಲಿಸಿ ಮಾತನಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿ ನಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನ ಆಚರಿಸಿ ಸಿಹಿ ವಿತರಿಸಲಾಯಿತು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕ ಮರಯ್ಯ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗವರಾದ ನಂಜಪ್ಪ ಶ್ರೀಕಂಠ ಶಾಂತ ಗ್ರಂಥಾಲಯದ ಚಂದ್ರು ಪೌರಕಾರ್ಮಿಕ ಸಂಘದ ಮುರುಗೇಶ್ ಹಾಗೂ ಪೌರಕಾರ್ಮಿಕರು ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
