ಕುಷ್ಟಗಿ: ಶ್ರೀ ವಾಲ್ಮೀಕಿ ಮಹರ್ಷಿಗಳು ಸಾರಿದ ಆದರ್ಶ, ತತ್ವ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಮಾನಪ್ಪ ತಳವಾರ ಹೇಳಿದರು. ಕುಷ್ಟಗಿ ತಾಲೂಕಿನ ಕಲಿಕೇರಿ ಗ್ರಾಮದಲ್ಲಿ ಮಂಗಳವಾರ ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಜಯಂತಿ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಳದೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾಲ್ಮೀಕಿ ವೃತ್ತಕ್ಕೆ ತಲುಪಿತು. ಅಲ್ಲಿ ಶ್ರೀ ವಾಲ್ಮೀಕಿ ಮಹರ್ಷಿಗಳ ವೃತ್ತಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಹನುಮಂತರಾವ್ ದೇಸಾಯಿ, ದುರಗನಗೌಡ ಬಲಕುಂದಿ, ಮುದಿಯಪ್ಪ ತಳವಾರ, ಈರಪ್ಪ ತೋಪಲಕಟ್ಟಿ, ರಾಮಪ್ಪ ತಳವಾರ, ಮುತ್ತಪ್ಪ ಸಾಹುಕಾರ, ಅಮರೇಶ ಬನ್ನಿಗೋಳಮಠ ಸೇರಿದಂತೆ ಗ್ರಾಮದ ವಿವಿಧ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಗ್ರಾಮದಲ್ಲಿ ಎಲ್ಲ ಸಮಾಜದವರು ಒಗ್ಗೂಡಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದ್ದು, ಸಾಮಾಜಿಕ ಸಾಮರಸ್ಯ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.
