ತಾಂಡವಪುರ ನವಂಬರ್ 4ನಗರಾಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ದಕ್ಷಿಣ ಭಾಗಕ್ಕೆ ಸಮಗ್ರ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಒಟ್ಟು ರೂ 100 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ ಭೂಮಿ ಪೂಜೆ ನೆರೆವೇರಿಸಿದರು ಇದೆ ವೇಳೆ ಸಮಾರಂಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು
ಹಿರಿಯೂರು ನಗರದ ಕೊಳಚೆ ನೀರು ವೇದಾವತಿ ನದಿಗೆ ಸೇರುತ್ತಿರುವುದನ್ನು ತಡೆದು, ಒಳಚರಂಡಿ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ನಂತರ ವಿಲೇವಾರಿ ಮಾಡುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಯೋಜನೆಯಿಂದ ನಗರದ ಸ್ವಚ್ಛತೆ, ನೈರ್ಮಲ್ಯ ಮತ್ತು ಜನರ ಜೀವನಮಟ್ಟ ಸುಧಾರಣೆಯಾಗಲಿದೆ. ಎಂದು ಸಚಿವರು ಹೇಳಿದರು ಈ ಮಹತ್ವದ ಕಾಮಗಾರಿಗಾಗಿ ನಿರಂತರವಾಗಿ ಪ್ರಯತ್ನಿಸಿದ್ದ ದಿವಂಗತ ಮಾಜಿ ಸಚಿವರಾದ ಡಿ. ಸುಧಾಕರ್ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಿ ಈ ಯೋಜನೆಯ ಶ್ರೇಯಸ್ಸು ಅವರಿಗೆ ಸಲ್ಲಬೇಕು ಎಂದು ಸಚಿವರು ಸ್ಮರಿಸಿಕೊಂಡರು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಇದೀಗ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ಮೇಲೆ 6ನೇ ಗ್ಯಾರಂಟೆಯಾಗಿ ಭೂಮಿ ಗ್ಯಾರಂಟಿ ಕೊಟ್ಟಿದ್ದಾರೆ. ಜೊತೆಗೆ ಯುವಜನರ ಅಭಿವೃದ್ಧಿ ಹಾಗೂ ಸಬಲೀಕರಣಕ್ಕಾಗಿ ಹೊಸ ಉಪಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಯುವಜನರ ಭವಿಷ್ಯಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಭಾರತ್ ಜೂಡೋ ಯುವ ಸಂಘಟನೆಗಳ ಸ್ಥಾಪಿಸಿ ಅವುಗಳಿಗೆ ₹1,000 ಕೋಟಿ ಅನುದಾನ ಒದಗಿಸುವ ಮಹತ್ವದ ಇಂದಿನ ಯುವ ಜನತೆಗೆ ವರದಾನವಾಗಲಿದೆ ಎಂದು ಸಚಿವರು ಹೇಳಿದರು ಕಾರ್ಯಕ್ರಮದಲ್ಲಿ ಪಟ್ಟನಾಯಕನಹಳ್ಳಿಯ ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾಸ್ವಾಮೀಜಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆ.ಎಚ್. ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೆ.ಎಸ್. ಬಸವಂತಪ್ಪ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಅಜಯ್ ಸಿಂಗ್, ಪೌರಾಡಳಿತ ಇಲಾಖೆಯ ಸಚಿವರಾದ ಹೆಚ್.ಸಿ. ಬಾಲಕೃಷ್ಣ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಗಳಾದ ಟಿ.ಬಿ. ಜಯಚಂದ್ರ, ಶಾಸಕರಾದ ಡಾ. ಕುಣಿಗಲ್ ರಂಗನಾಥ್, ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಮಾಜಿ ಸಚಿವರಾದ ಎಚ್. ಆಂಜನೇಯ, ಮಾಜಿ ಸಂಸದರಾದ ಬಿ.ಎನ್. ಚಂದ್ರಪ್ಪ, ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ದ್ರಾಕ್ಷಿ ಮಂಡಳಿ ಅಧ್ಯಕ್ಷರಾದ ಜಿ. ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಹೆಚ್.ಟಿ. ಮಂಜಪ್ಪ, ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ರಾಮಪ್ಪ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಹೇಶ್ ಹಾರೋಗೆರೆ, ಕಾಂಗ್ರೆಸ್ ಮುಖಂಡರಾದ ಸುಹಾಸ್ ಸುಧಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್ ಸೇರಿದಂತೆ ಈ ಭಾಗದ ಮುಖಂಡರು ಸಾರ್ವಜನಿಕರು ಸಮಾರಂಭದಲ್ಲಿ ಭಾಗಿಯಾಗಿದ್ದರು

Leave a Reply

Your email address will not be published. Required fields are marked *