ತಾಂಡವಪುರ ನವಂಬರ್ 6ಮೈಸೂರಿನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ ಎಂಬ ಘೋಷಣ ವಾಕ್ಯದೊಡನೆ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಅವರ ನೇತೃತ್ವದಲ್ಲಿಪಾದಯಾತ್ರೆ ನಡೆಸಲಾಯಿತು
ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ “ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ” ಎಂಬ ಘೋಷವಾಕ್ಯದೊಂದಿಗೆ ನಡೆದ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ರಾಜ್ಯದಕ್ಷ ವಿಜಯೇಂದ್ರ ರವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರಿಗೆ ಬೇಕಾಗುವ ಅಗತ್ಯ ವಸ್ತುಗಳ ಬೆಲೆ ಬೆಲೆಯನ್ನು ಏರಿಸಿ ರೈತ ವಿರೋಧಿ ಜನ ವಿರೋಧಿ ಬಡವರ ವಿರೋಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ, ರೈತರ ಬೇಡಿಕೆಗಳು, ಜನಸಾಮಾನ್ಯರ ಹಿತಾಸಕ್ತಿ ಹಾಗೂ ಉತ್ತಮ ಆಡಳಿತಕ್ಕಾಗಿ ಒಗ್ಗಟ್ಟಿನ ಧ್ವನಿ ಮೊಳಗಿಸುವ ಉದ್ದೇಶದಿಂದ ನಡೆದ ಈ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈವಿಜಯೇಂದ್ರ ಸಂಸದ ಸಿಖಂಡದತ್ತ ಶ್ರೀಕಂಠ ದತ್ತ ಎದುವೀರ್ ಒಡೆಯರಮಾಜಿ ಸಚಿವರಾದ ಸಿ.ಟಿ. ರವಿ ಅವರು, ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ ಅವರು, ರಾಜ್ಯ ಉಪಾಧ್ಯಕ್ಷರಾದ ಎನ್. ಮಹೇಶ್ ಅವರು, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮಿ ಅಶ್ವಿನ್ ಗೌಡ ಶಾಸಕರಾದಶ್ರೀವತ್ಸ ಅವರು, ಸಿಮೆಂಟ್ ಮಂಜು ಅವರು, ಹೆಚ್.ಕೆ. ಸುರೇಶ್ ಅವರು, ವಿಧಾನ ಪರಿಷತ್ ಸದಸ್ಯರಾದ ರಘು ಕೌಟಿಲ್ಯ ಅವರು, ಶ್ರೀ ಸುಜಾ ಕುಶಾಲಪ್ಪ ಅವರು, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ ಅವರು, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಎನ್. ಸುಬ್ಬಣ್ಣ ಅವರು ಸೇರಿದಂತೆ ಪಕ್ಷದ ಹಲವು ಮುಖಂಡರು, ಪದಾಧಿಕಾರಿಗಳು ಹಾಗೂ ಸಾವಿರಾರು ಪಕ್ಷದಕಾರ್ಯಕರ್ತರು ಭಾಗಿಯಾಗಿದ್ದರು
