ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಳಿ ಚೀಟಿಯಲ್ಲಿ ಔಷಧ ಬರೆದು ಹೊರಗಿನಿಂದ ಖರೀದಿಸಲು ಸೂಚಿಸಿದರೆ ಕಠಿಣ ಕ್ರಮ: ಯು.ಟಿ. ಖಾದರ್ ಎಚ್ಚರಿಕೆ

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಉಚಿತವಾಗಿ ಹಾಗೂ ಗುಣಮಟ್ಟದ ಔಷಧಗಳನ್ನು ಆಸ್ಪತ್ರೆಯಲ್ಲೇ ವಿತರಿಸಬೇಕು. ವೈದ್ಯರು ಬಿಳಿ ಚೀಟಿಯಲ್ಲಿ ಔಷಧ ಬರೆದು ಹೊರಗಿನ ಮೆಡಿಕಲ್ ಸ್ಟೋರ್‌ಗಳಿಂದ ಖರೀದಿಸುವಂತೆ ಸೂಚಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬಿಳಿ ಚೀಟಿಯ ಮೂಲಕ ಹೊರಗಿನ ಮೆಡಿಕಲ್ ಸ್ಟೋರ್‌ಗಳಲ್ಲಿ ಅನಧಿಕೃತವಾಗಿ ಔಷಧ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ವೈದ್ಯರು ಬಿಳಿ ಚೀಟಿಯಲ್ಲಿ ಔಷಧ ಬರೆದು ಹೊರಗಿನಿಂದ ಖರೀದಿಸುವಂತೆ ಸೂಚಿಸುವುದು ಅಥವಾ ಅಧಿಕೃತ ಲೆಟರ್‌ಹೆಡ್ ಇಲ್ಲದೆ ಔಷಧ ವಿತರಿಸುವುದು ಕಂಡುಬಂದರೆ ಸಂಬಂಧಪಟ್ಟ ಖಾಸಗಿ ಮೆಡಿಕಲ್ ಸ್ಟೋರ್‌ಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಲ್ಲದೆ, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವೈದ್ಯರು ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರುವ ಹಿರಿಯ ಅಧಿಕಾರಿಗಳ ವಿರುದ್ಧವೂ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ಬೇಜವಾಬ್ದಾರಿತನವನ್ನು ಸಹಿಸುವುದಿಲ್ಲ. ಸರ್ಕಾರದ ಉಚಿತ ಆರೋಗ್ಯ ಸೌಲಭ್ಯಗಳು ಬಡ ರೋಗಿಗಳಿಗೆ ಪಾರದರ್ಶಕವಾಗಿ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು