ಕಂಪ್ಲಿ:
ಪ್ರತಿಯೊಬ್ಬ ಮಹಿಳೆಗೂ ತನ್ನ ತವರು ಮನೆಯಿಂದ ಬರುವ ಸೀರೆ ಮತ್ತು ಉಡಿ ತುಂಬುವ ಶಾಸ್ತ್ರ ಕೇವಲ ಸಂಪ್ರದಾಯವಲ್ಲ, ಅದೊಂದು ಭಾವನಾತ್ಮಕ ಬೆಸುಗೆ. ಮಹಿಳೆಯೇ ಇಡೀ ಕುಟುಂಬದ ಆಧಾರ ಸ್ತಂಭವಾಗಿದ್ದು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ದೇಶದ ಅತ್ಯುತ್ತಮ ಪ್ರಜೆಯನ್ನಾಗಿ ರೂಪಿಸುವ ಗುರುತರ ಜವಾಬ್ದಾರಿ ಅವಳ ಮೇಲಿದೆ ಎಂದು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಧರ್ಮಪತ್ನಿ ಶ್ರೀಮತಿ ಶ್ರೀದೇವಿ ಜಿ.ಎನ್.ಗಣೇಶ್ ಅಭಿಪ್ರಾಯಪಟ್ಟರು.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಗೋಡ್‌ ಹಾಳ್ ಗ್ರಾಮದ ಶ್ರೀ ಕೆಂಚಮ್ಮ ದೇವಸ್ಥಾನದ ಮುಂಭಾಗದಲ್ಲಿ ಈ ಭವ್ಯ ಕಾರ್ಯಕ್ರಮ ಜರುಗಿತು. ದಿವಂಗತ ಜೆ.ಎನ್.ವೆಂಕೋಬಣ್ಣ ಹೊಸಪೇಟೆ ಅವರ ಪುಣ್ಯ ಸ್ಮರಣೆಯ ಆಶೀರ್ವಾದದೊಂದಿಗೆ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಫೌಂಡೇಶನ್ ಹಾಗೂ ಯುವ ಮುಖಂಡ ದೊಡ್ಡ ಬಸವರಾಜ ಬಡಗಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಅಂಗವಾಗಿ ಈ ಸಡಗರದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶುಭ ಶುಕ್ರವಾರದ ಸಾಯಂಕಾಲದ ಸುಸಂದರ್ಭದಲ್ಲಿ 101 ಜನ ಮುತ್ತೈದೆಯರಿಗೆ ಉಚಿತ ಸೀರೆ ವಿತರಿಸಿ, ಉಡಿ ತುಂಬುವ ಮಂಗಳಮಯ ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀದೇವಿ ಚಾಲನೆ ನೀಡಿದರು.

ಬೆಳಗೋಡ್ ಹಾಳ್ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಶ್ರೀದೇವಿ ಗಣೇಶ್, “ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಉಡಿ ತುಂಬುವ ಪದ್ಧತಿಗೆ ವಿಶೇಷ ಗೌರವವಿದೆ. ಇಂತಹ ಶ್ರೇಷ್ಠ ಸಂಪ್ರದಾಯವನ್ನು ಗ್ರಾಮೀಣ ಭಾಗದಲ್ಲಿ ಇಂದಿಗೂ ಜೀವಂತವಾಗಿಟ್ಟಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಒಂದು ಸುಂದರ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ. ಮಗು ಬೆಳೆದು ದೇಶದ ಉತ್ತಮ ಪ್ರಜೆಯಾಗಬೇಕಾದರೆ ತಾಯಿಯೇ ಮೊದಲ ಗುರು” ಎಂದು ತಿಳಿಸಿದರು.
*ನವೆಂಬರ್ 15ಕ್ಕೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ:*
ನಂತರ ಮಾತನಾಡಿದ ಯುವ ಮುಖಂಡ ದೊಡ್ಡ ಬಸವರಾಜ ಬಡಗಿ ಅವರು, ಬೆಳಗೋಡ್ ಹಾಳ್ ಗ್ರಾಮದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹ ಬೃಹತ್ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗುತ್ತಿದೆ. ನವೆಂಬರ್ 15ರಂದು ಈ ಕಲ್ಯಾಣ ಮಹೋತ್ಸವ ನಡೆಯಲಿದ್ದು, ಇದರ ಮುನ್ನಡೆಯಾಗಿ ಶಾಸಕರ ಧರ್ಮಪತ್ನಿ ಶ್ರೀಮತಿ ಶ್ರೀದೇವಿ ಅತ್ತಿಗೆ ರವರ ದಿವ್ಯ ಸಮ್ಮುಖದಲ್ಲಿ 101 ಮಹಿಳೆಯರಿಗೆ ಗೌರವಪೂರ್ವಕವಾಗಿ ಉಡಿ ತುಂಬುವ ಶಾಸ್ತ್ರವನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕರ ಪತ್ನಿ ಶ್ರೀಮತಿ ಶ್ರೀದೇವಿ ಗಣೇಶ್ ಅವರನ್ನು ಗ್ರಾಮದ ಮಹಿಳೆಯರು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಅತ್ಯಂತ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಮಂಗಳಕರ ಪ್ರಸಂಗದಲ್ಲಿ ಪ್ರಮುಖ ಮುಖಂಡರಾದ ವೈ.ವಿರುಪಣ್ಣ, ನಬೀ ಸಾಬ್, ಕೆ.ಗಂಗಾಧರ, ರಾಮಕೃಷ್ಣ, ರೇಣುಕಪ್ಪ, ಸುಭಾನ್, ಮಹಾಂತೇಶ, ದುರುಗಪ್ಪ, ರವಿಕುಮಾರ, ಮರಿಸ್ವಾಮಿ, ಬಡಿಗಿ ದುರುಗಪ್ಪ, ಬಡಗಿ ಹನುಮಂತಪ್ಪ,ದೇವರಾಜ್, ಗುರುಬಸವ, ಸಣ್ಣ ದುರುಗಪ್ಪ, ಲಕ್ಷ್ಮಣ, ಮಂಜುನಾಥ, ಹಾಗೂ ಮಹಿಳಾ ಮುಖಂಡರಾದ ಶಂಕ್ರಮ್ಮ, ಮರಿಯಮ್ಮ, ಜಿನಿಗಮ್ಮ, ಲಕ್ಷ್ಮಿ, ಶಾರದಮ್ಮ, ಮಲ್ಲಮ್ಮ, ಹುಲಿಗೆಮ್ಮ,
ಹನುಮಂತಮ್ಮ, ರಾಧಾ, ರಾಧಿಕಾ, ಪಾರ್ವತಿ, ಮಂಜುಳಾ, ಮರಿಯಮ್ಮ, ಶರಣಮ್ಮ,
ಹನುಮಂತಮ್ಮ ಸೇರಿದಂತೆ ನೂರಾರು ಗ್ರಾಮೀಣ ಮಹಿಳೆಯರು, ಯುವಕರು ಮತ್ತು ಮುಗ್ಧ ಮಕ್ಕಳು ಭಾಗವಹಿಸಿ ಕಾರ್ಯಕ್ರಮದ ಚಂದವನ್ನು ಹೆಚ್ಚಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು