ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ .ಸಭಾಂಗಣದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ನಡೆದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಪಂಚಾಯಿತಿ ಇ.ಓ. ಪುರುರಾಜ್ ಸಿಂಗ್ ಸೋಲಂಕಿ ಐ.ಎ.ಎಸ್. ಮಾತನಾಡಿ ಪೋಲಿಯೋ ಕಾಯಿಲೆ ಒಮ್ಮೆ ಮಗುವಿನಲ್ಲಿ ಕಾಣಿಸಿಕೊಂಡಲ್ಲಿ ಮಗು ಅಂಗವಿಕಲವಾಗುತ್ತದೆ ಅದ್ದರಿಂದ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಗಂಭಿರವಾಗಿ ಪರಿಗಣಿಸಿ ತಾಲೂಕಿನ ಯಾವೊಂದು ಮಗು ಕೂಡ ಪೋಲಿಯೋ ಲಸಿಕೆಯಿಂದ ಹೊರ ಉಳಿಯದಂತೆ ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡುವ ಮೂಲಕ ತಾಲೂಕಿನ 1ರಿಂದ 5ರ ಒಳಗಿನ ಪ್ರತಿಯೊಂದು ಮಗುವಿಗೂ ಕೂಡ ಪೋಲಿಯೋ ಲಸಿಕೆ ಹಾಕಿಸುವುದಕ್ಕೆ ಕ್ರಮ ಕೈಗೊಳ್ಳಬೇಕು ಪೋಲಿಯೋ ಲಸಿಕೆ ಹಾಕಿಸುವುದಕ್ಕೆ ನಿರಾಕರಿಸುವ ಪಾಲಕರ ಮನವೋಲಿಸಿ ಲಸಿಕೆಯನ್ನು ಹಾಕಿಸಬೇಕು.ಹೈರಿಸ್ಕ ಇರುವ ಬೂತ್ ಗಳಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ನೇಮಕ ಮಾಡಲಾಗುವುದು ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ತೊಂದರೆ ಉಂಟಾದಲ್ಲಿ ಕೂಡಲೆ ತಾಲೂಕು ಆಡಳಿತದ ಗಮನಕ್ಕೆ ತರಬೇಕು.ಲಸಿಕೆಯನ್ನು ಶೀಥಿಲಕರಣ ಪೆಟ್ಟಿಗೆಯಲ್ಲಿ ಇಡಬೇಕಾಗಿರುವುದರಿಂದ ಜೆಸ್ಕಂ ಇಲಾಖೆ ಅಧಿಕಾರಿಗಳು ವಿದ್ಯುತ್ ನಿಲುಗಡೆಯಾಗದಂತೆ ಕ್ರಮ ಕೈಗೊಳ್ಳಬೇಕು, ಬಸ್ ನಿಲ್ದಾಣದಲ್ಲಿ ಮಕ್ಕಳಿಗೆ ಲಸಿಕೆ ಹಾಕುವುದಕ್ಕೆ ಕಲ್ಯಾಣ ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಸೌಲಭ್ಯ ಕಲ್ಪಿಸಬೇಕು, ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಶಾಲಾ ಮಕ್ಕಳಿಂದ ಜಾಗೃತಿ ಜಾಥ ನಡೆಸಬೇಕು, ಅಂಗನವಾಡಿ ಕಾರ್ಯಕರ್ತರು ,ಆಶಾಕಾರ್ಯಕರ್ತರು ಲಸಿಕೆ ಹಾಕುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಾಲೂಕು ಆರೋಗ್ಯಧಿಕಾರಿ ಡಾ.ಶರಣಬಸವರಾಜ ಮಾತನಾಡಿ ಮಾನ್ವಿ ವಿಧಾನಸಭಾ ವ್ಯಾಪ್ತಿಯಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಡಿ.21 ರಂದು ಬೂತ್ ಡೆ ಅಂಗವಾಗಿ ಬೂತ್ ಗಳಲ್ಲಿ 1ರಿಂದ 5ರ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. ಖ.22,23,24 ರಂದು ಪ್ರತಿ ಮನೆ ಮನೆಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದಕ್ಕೆ ಕ್ರಮ ಕೈಗೊಳ್ಳಲಿದ್ದಾರೆ .ಮಾನ್ವಿ ಕ್ಷೇತ್ರದ ವ್ಯಾಪ್ತಿಯಲ್ಲಿ 5 ವರ್ಷದೊಳಗಿನ 47 ಸಾವಿರ ಮಕ್ಕಳನ್ನು ಗುರುತಿಸಲಾಗಿದ್ದು ಪೋಲಿಯೋ ಲಸಿಕೆ ಹಾಕುವುದಕ್ಕೆ ಒಟ್ಟು 221 ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು442 ಸಿಬ್ಬಂದಿಗಳು 47 ಮೇಲ್ವಿಚಾರಕರು, 8 ಸಂಚಾರಿ ತಂಡಗಳ ವ್ಯವಸ್ಥೆ ಮಾಡಲಾಗಿದೆ. ಎಂದು ತಿಳಿಸಿದರು.
ಸಭೆಯಲ್ಲಿ ಗ್ರೇಡ್2 ತಹಸೀಲ್ದಾರ್ ಅಬ್ದುಲ್ ವಾಹಿದ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ. ಸೇರಿದಂತೆ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದರು. ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ .ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ನಡೆದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಪಂಚಾಯಿತಿ ಇ.ಓ. ಪುರುರಾಜ್ ಸಿಂಗ್ ಸೋಲಂಕಿ ಐ.ಎ.ಎಸ್. ಮಾತನಾಡಿದರು.

