ಸಿರವಾರ.ನಂ.07- ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದ ದಲಿತರ ಮೇಲೆ ದೌರ್ಜನ್ಯ ನಡೆಸಿ ಸಾಮಾಜಿಕ ಬಹಿಷ್ಕಾರ ಹಾಕಿದವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಿಂಧನೂರಿನ ಪಿ.ಡಬ್ಲ್ಯು.ಡಿ ಕ್ಯಾಂಪ್‌ನ ಅಂಬೇಡ್ಕ‌ರ್ ಸರ್ಕಲ್‌ನಿಂದ ತಿಡಿಗೋಳವರೆಗೆ ಹಮ್ಮಿಕೊಂಡಿರುವ ಬೈಕ್ ರ್ಯಾಲಿಯಲ್ಲಿ ಸಿರವಾರ ತಾಲೂಕಿನಿಂದ ಸುಮಾರು 50ರಿಂದ 100 ಬೈಕ್‌ ಗಳ ಮೂಲಕ ರ್ಯಾಲಿಯಲ್ಲಿ ಭಾಗವಹಿಸಲಾಗುವುದು ಎಂದು ದಲಿತ ಮುಖಂಡ ಭಸವರಾಜ ಭಂಡಾರಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು

ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ದಿ. ಅಕ್ಟೋಬರ್ 18ರಂದು ನಡೆದ ಮಾರುತೇಶ್ವರ (ಆಂಜನೇಯ್ಯ) ಜಾತ್ರೆಯಲ್ಲಿ ಸವರ್ಣೀಯರು, ದಲಿತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆಯು ಹೇಯಕೃತ್ಯವಾಗಿದ್ದು, ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರವೂ ಇನ್ನೂ ಜಾತಿ ಮೌಡ್ಯ ಹಾಗೂ ಅಸ್ಪೃಶ್ಯತೆ ಜೀವಂತವಾಗಿರುವುದಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಚಾರ ಕೊಲೆ ಮುಂತಾದ ಸರಣಿ ದುಷ್ಪಕೃತ್ಯಗಳ ಮುಂದುವರಿಕೆ ತಿಡಿಗೋಳದಲ್ಲಿ ನಡೆದಿದೆ. ದೌರ್ಜನ್ಯ ನಡೆದು ಎರಡು ವಾರ ಕಳೆದರೂ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಅವರು ಇದುವರೆಗೂ ಭೇಟಿ ಕೊಟ್ಟಿರುವುದಿಲ್ಲ ಹಾಗೂ ದೌರ್ಜನ್ಯ ಮಾಡಿದ ಮುಖ್ಯ ಆರೋಪಿಗಳನ್ನು ಇದುವರೆಗೂ ಬಂಧಿಸಿರುವುದಿಲ್ಲ. ಭಯದ ಕಾರಣದಿಂದಾಗಿ ದಲಿತರು ಗ್ರಾಮ ತೊರೆದಿದ್ದಾರೆ. ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ಈ ದೌರ್ಜನ್ಯದ ಕುರಿತು ನಿರ್ಲಕ್ಷ್ಯ ವಹಿಸಿದೆ ಇದಕ್ಕೆ ಗೃಹ ಸಚಿವರ ತಾರತಮ್ಯ ಭಾವನೆಯನ್ನು ಸಮಾಜ ಖಂಡಿಸುತ್ತದೆ ಎಂದು ಹೇಳಿದರು.

ಎರಡು ದಿನಗಳ ಹಿಂದೆ ರಾಯಚೂರಿನ ಅಂಬೇಡ್ಕರ ಭವನದಲ್ಲಿ ಜರುಗಿದ ಪ.ಜಾ ಪ.ಪಂ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಮಾಜ ಕಲ್ಯಾಣ ಅಧಿಕಾರಿಗಳು ವೇದಿಕೆಯ‌ ಮೇಲೆ ದಲಿತ ಮುಖಂಡರು ಅವರ ಸಮಸ್ಯೆಯನ್ನು ಹೇಳಿಕೊಳ್ಳುವ ಸಮಯದಲ್ಲಿ ಅವರ ಅವಹಾಲುಗಳನ್ನು ಕೇಳದೇ ಹರಟೆ ಮಾಡುತ್ತಿರುವ ದೃಶ್ಯವನ್ನು ಖಂಡಿಸುತ್ತೇವೆ, ಕಾಟಾಚಾರಕ್ಕೆ ನಡೆದಿದೆ ಎಂದು ಆರೋಪಿಸಿದರು‌.

ವಿಜಯರಾಣಿ ಮಾತನಾಡಿದರು. ಈ ಸಂದರ್ಭದಲ್ಲಿ ಬಡ್ಡ ಹನುಮಂತ, ಸವಾರೆಪ್ಪ, ಸಾಮೇಲಪ್ಪ, ಮಲ್ಲಪ್ಪ ಕಜ್ಜಿ, ಅರಳಪ್ಪ ಯದ್ದಲದಿನ್ನಿ, ಮಲ್ಲಪ್ಪ ನಾರಬಂಡ, ಎಂ. ಮನೋಹರ, ದಾನಪ್ಪ, ಜಯಪ್ಪ ಗುತ್ತೆದಾರ್, ಗ್ಯಾನಪ್ಪ ಸೂಜಪ್ಪ, ಕರಿಯಪ್ಪ ತೋರಣದಿನ್ನಿ, ರಾಮಣ್ಣ ಮೇಸ್ತ್ರಿ, ಮೇಶಕ್ ಕೆಂಪು, ಯೇಸುಮಿತ್ರ ಮಚ್ಚಿ, ಮೌನೇಶ ಎಸ್.ಲಕ್ಷ್ಮಣ ಸೇರಿದಂತೆ ಇನ್ನಿತರರು ಇದರು.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು