ರಾಯಚೂರು— ನಗರದ ನೇತಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎನ್‌.ಜಿ.ಓ. ಕಾಲೋನಿಯಲ್ಲಿ ವಾಸವಾಗಿದ್ದ ಪ್ರತಿಯೊಂದು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ದಾನ ಧರ್ಮಕ್ಕೆ ಹೆಸರಾಗಿದ್ದ ಅನಾರೋಗ್ಯ ಪೀಡಿತ ರಂಗನಾಥ ಕೋರಿಶೆಟ್ಟಿ ವಯಸ್ಸು-55 ಇವರನ್ನು ಸ್ಥಳೀಯ ನೀಲಕಂಠೇಶ್ವರ ಟೆಂಪಲ್ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸ್ಥಳೀಯರ ಮತ್ತು ನೇತಾಜಿ ನಗರದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇರೆಗೆ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀ ಮಠ ಸೇವಾ ಟ್ರಸ್ಟ್(ರಿ) ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಬುದ್ಧಿಮಾಂದ್ಯ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಹಾಗೂ ಸಿಬ್ಬಂದಿಗಳಾದ ಮರಿಯಪ್ಪ ಹರ್ಷವರ್ಧನ ಇವರುಗಳ ಸಮಕ್ಷಮದಲ್ಲಿ ಆಶ್ರಮಕ್ಕೆ ಕರೆತಂದು ಆಶ್ರಯ ಕಲ್ಪಿಸಲಾಯಿತು. ಈ ಸಮಯದಲ್ಲಿ ನೀಲಕಂಠೇಶ್ವರ ಟೆಂಪಲ್ ಟ್ರಸ್ಟ್ ನ ಸದಸ್ಯರಾದ ಬಸವರಾಜ ಪಡಶೆಟ್ಟಿ ಮಾತನಾಡಿ ನಮ್ಮ ರಂಗನಾಥ್ ಅವರು ನಿರಂತರ ಸಮಾಜ ಸೇವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ತಮ್ಮದೇ ಆದಂತಹ ಬಹುದೊಡ್ಡ ಮಟ್ಟದ ಸಹಾಯ ಸಹಕಾರ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಬದುಕು ಇಂದು ಬಹುದೊಡ್ಡ ಅಘಾತದೊಂದಿಗೆ ಸಾಗುತ್ತಿದೆ. ಪೋಲಿಸ್ ಇಲಾಖೆಯ ಅಧಿಕಾರಿಗಳು ಕೂಡ ಹೆಂಡತಿ ಮಕ್ಕಳಿಗೆ ಇವರ ಸ್ಥಿತಿಯನ್ನು ತಿಳಿಸಿದರು ಕೂಡ ಸ್ಪಂದನೆ ಮಾಡುತ್ತಿಲ್ಲ. ಆದ್ದರಿಂದ ನಮ್ಮ ಕರುನಾಡಿನ ಕರಣೆಯ ಕುಟುಂಬವಾದ ಸಿಂಧನೂರಿನ ಕಾರುಣ್ಯ ಕುಟುಂಬವನ್ನು ನಾವು ಸಂಪರ್ಕಿಸಿದಾಗ ಇವರ ಸ್ಥಿತಿಯನ್ನು ವಿವರಿಸಿದಾಗ ಒಪ್ಪಿಕೊಂಡಿರುವ ಈ ಸಂಸ್ಥೆಯ ಕರುಣಾಮಯಿ ಕಾರ್ಯಗಳನ್ನು ಮೆಚ್ಚಿಕೊಂಡೆವು. ಕೇವಲ ಒಬ್ಬ ಬಡಜಂಗಮರಾಗಿ ದಾನಿಗಳ ಸಹಾಯ ಸಹಕಾರದೊಂದಿಗೆ ಮಾಡುತ್ತಿರುವ ಕಾರುಣ್ಯ ಆಶ್ರಮದ ಕಾರ್ಯ ಶ್ಲಾಘನೀಯ ಇಂತಹ ಸೇವ ಕಾರ್ಯಕ್ಕೆ ನಮ್ಮ ನೀಲಕಂಠೇಶ್ವರ ಸೇವಾ ಟ್ರಸ್ಟ್ ವತಿಯಿಂದ ಹಾಗೂ ಎನ್. ಜಿ. ಒ. ಕಾಲೋನಿಯ ಎಲ್ಲರೂ ಸಹಕರಿಸುತ್ತೇವೆ ಎಂದು ಮಾತನಾಡಿದರು. ಈ ಸಮಯದಲ್ಲಿ ಸುರೇಶ ಕೋರಿಶೆಟ್ಟಿ.ಶೈಲಜಾ ಕುಲಕರ್ಣಿ ದ್ವಿತೀಯ ದರ್ಜೆ ಸಹಾಯಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು. ಮಹಾಂತೇಶ ಪೂರತಿಪ್ಲಿ ಅಧ್ಯಕ್ಷರು ನೀಲಕಂಠೇಶ್ವರ ಟೆಂಪಲ್ ಟ್ರಸ್ಟ್ ಎನ್.ಜಿ. ಒ. ಕಾಲೋನಿ ರಾಯಚೂರು. ಬಸವರಾಜ ಪಡಶೆಟ್ಟಿ ಕಾರ್ಯದರ್ಶಿಗಳು ನೀಲಕಂಠೇಶ್ವರ ಟೆಂಪಲ್ ಟ್ರಸ್ಟ್.ಬಸವರಾಜ ನಿವೃತ್ತ ಜಮಾದಾರರು. ಮಂಜುಳಾ ಡಬ್ಲ್ಯೂ. ಪಿ.ಸಿ. ನೇತಾಜಿ ಪೊಲೀಸ್ ಠಾಣೆ ರಾಯಚೂರು. ಹಾಗೂ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ. ಸಿಬ್ಬಂದಿಗಳಾದ ಮರಿಯಪ್ಪ ಹರ್ಷವರ್ಧನ ಹಾಗೂ ಅನೇಕ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು