ಸಿಂಧನೂರು: ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ, ದೇಶಪ್ರೇಮ ಹಾಗೂ ಶಿಸ್ತು ಬದ್ಧ ಜೀವನ ಸಾಗಿಸಲು ಅನುಕೂಲವಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಿಂಧನೂರು ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಸ್.ಶರಣೇಗೌಡ ಹೇಳಿದರು
ಅವರು ನಗರದ ವಿದ್ಯಾಪಬ್ಲಿಕ್ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಭಾರತ್ ಸ್ಕೌಟ್ಸ್ನ ಸಂಸ್ಥಾಪನಾ ದಿನಾಚಾರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಯ ಮುಖ್ಯಗುರುಮಾತೆ ಲಕ್ಷ್ಮೀ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಗೈಡ್ ಕ್ಯಾಪ್ಟನ್ ಆರತಿ, ಪಿಎಮ್ಶ್ರೀ ಆದರ್ಶ ಶಾಲೆಯ ಪ್ರಭಾರಿ ಮುಖ್ಯಗುರು ವೀರೇಶ ಗೋನವಾರ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಬೀರಪ್ಪ ಶಂಭೋಜಿ, ಸ್ಕೌಟ್ ಮಾಸ್ಟರ್ ಜಡೇಶ ಉಪಸ್ಥಿತರಿದ್ದರು.
