ಮಸ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಕಾರ್ಯ ಮಾಡುತ್ತಿದೆ ಎಂದು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಜೆ. ಹೇಳಿದರು.

ಪಟ್ಟಣದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ 25 ಕಡೆ ಜ್ಞಾನ ವಿಕಾಸ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಲ್ಲಿ ಶಿಕ್ಷಣ, ಆರೋಗ್ಯ, ಸಾಮಾಜಿಕ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ ಹಾಗೂ ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಸಂಸ್ಥೆ ಅನುಷ್ಠಾನಗೊಳಿಸುತ್ತಿದೆ ಎಂದರು.

ಜನಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಅಮರೇಶ ಮಾತನಾಡಿ, ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸುವುದರೊಂದಿಗೆ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಂಸ್ಥೆಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಮಾತನಾಡಿ, ಮಹಿಳೆಯರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮುಂದೆ ಬರಬೇಕು. ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ಒದಗಿಸುವ ಅವಕಾಶಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಸಂಸ್ಥೆಯ ಸಹಭಾಗಿತ್ವದ ಸ್ವಸಹಾಯ ಗುಂಪುಗಳಿಗೆ ಲಾಭಾಂಶವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು

ಡಾ. ಬಿ.ಎಚ್. ದಿವಟರ್, ಪುರಸಭೆ ಸದಸ್ಯ ಕೃಷ್ಣ ಚಿಗರಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷೆ ವಿದ್ಯಾವತಿ ವನಕಿ, ಉಪನ್ಯಾಸಕಿ ನಾಗರತ್ನ ಪಿ. ಗುತ್ತೆದಾರ, ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಜಗದೀಶ ಬಂಡಾರಿ ಇದ್ದರು.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು