ತಾಂಡವಪುರ ನವಂಬರ್ 7 ಮೈಸೂರು ಜಿಲ್ಲೆ ಕೆ.ಆರ್. ನಗರದಲ್ಲಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ನಗಾರಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಎಸ್.ಯತೀಂದ್ರ ಸಿದ್ದರಾಮಯ್ಯನ ರವರು ಉದ್ಘಾಟಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ

ಸರ್ಕಾರದ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಿ, ಪಾರದರ್ಶಕವಾಗಿ ಮತ್ತು ಸಕಾಲದಲ್ಲಿ ತಲುಪಬೇಕು ಎಂಬ ಉದ್ದೇಶದಿಂದ ಪ್ರಜಾಸೇವೆ ಆಂದೋಲನವನ್ನು ನಡೆಸಲಾಗುತ್ತಿದೆ. ಸರ್ಕಾರಿ ಕಚೇರಿಗಳಿಗೆ ಜನರು ಅಲೆದಾಡುವ ಬದಲು, ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸೇವೆ ಒದಗಿಸಲು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು…

ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದಷ್ಟೇ ಅಲ್ಲದೆ, ಪ್ರತಿಯೊಬ್ಬ ನಾಗರಿಕನ ಸಮಸ್ಯೆಗೂ ಆಡಳಿತ ವ್ಯವಸ್ಥೆ ಸ್ಪಂದಿಸಬೇಕು ಎಂಬುದು ನಮ್ಮ ಆಶಯ. ಜನರ ಅಹವಾಲುಗಳಿಗೆ ಸ್ಪಂದಿಸಿ, ಅವರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಇಂತಹ ಜನಸಂಪರ್ಕ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ತಿಳಿಸಿದರು…..

ಶಾಸಕ ಡಿ ರವಿಶಂಕರ್ ಮಾತನಾಡಿ

ಸರ್ಕಾರದ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಿ, ಪಾರದರ್ಶಕವಾಗಿ ಮತ್ತು ಸಕಾಲದಲ್ಲಿ ತಲುಪಬೇಕು ಎಂಬ ಉದ್ದೇಶದಿಂದ ಪ್ರಜಾಸೇವೆ ಆಂದೋಲನವನ್ನು ನಡೆಸಲಾಗುತ್ತಿದೆ. ಸರ್ಕಾರಿ ಕಚೇರಿಗಳಿಗೆ ಜನರು ಅಲೆದಾಡುವ ಬದಲು, ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸೇವೆ ಒದಗಿಸಲು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದೆ.

ಮುಖ್ಯ ಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಸರ್ಕಾರವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಭೂಮಿ ಇಲ್ಲದವರಿಗೆ ಭೂಮಿ ಒದಗಿಸಲು ಭೂ ಗ್ಯಾರಂಟಿ , ಸರ್ಕಾರಿ ಸೇವೆಗಳನ್ನು ಸುಲಭವಾಗಿ ಪಡೆಯಲು ಡಿಜಿಟಲ್ ಪೋರ್ಟಲ್‌ಗಳ ಮೂಲಕ ವ್ಯವಸ್ಥೆ ಕಲ್ಪಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಸೌಲಭ್ಯ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ ಅವರು

ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದಷ್ಟೇ ಅಲ್ಲದೆ, ಪ್ರತಿಯೊಬ್ಬ ನಾಗರಿಕನ ಸಮಸ್ಯೆಗೂ ಆಡಳಿತ ವ್ಯವಸ್ಥೆ ಸ್ಪಂದಿಸಬೇಕು ಎಂಬುದು ನಮ್ಮ ಆಶಯ. ಜನರ ಅಹವಾಲುಗಳಿಗೆ ಸ್ಪಂದಿಸಿ, ಅವರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಇಂತಹ ಜನಸಂಪರ್ಕ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ ಪ್ರತಿಗಳನ್ನು ವಿತರಿಸಲಾಯಿತು. ಮೈಸೂರು ಜಿಲ್ಲಾ ಅಂಕಿ-ಅಂಶಗಳ ನೋಟ ಪುಸ್ತಕವನ್ನೂ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಡಿ ರವಿಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಐಶ್ವರ್ಯ ರವರು ,ಕೆ.ಆರ್ ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ತಹಸಿಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ರೈತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು