ಸಿಂಧನೂರು ನ.೮
ಕಲ್ಯಾಣ ಕರ್ನಾಟಕ ದರ್ವೇಶ್ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕು ಮಟ್ಟದಲ್ಲಿ ಸಂಘಟನೆ ಬಲಪಡಿಸುವ ಉದ್ದೇಶದಿಂದ ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ರಹೀಮ್ ಶಾ ಮಕಾನದಾರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದರ್ವೇಶ್ ಅಲೆಮಾರಿ, ಅರೆ ಅಲೆಮಾರಿ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಜನಾಂಗದ ಮಕ್ಕಳಿಗೆ ಉತ್ತಮ ಶಿಕ್ಷಣ, ಬಡಬಗ್ದರ ಕುಟುಂಬಗಳಿಗೆ ಸರ್ಕಾರದ ಸೌಲಭ್ಯ ತಲುಪಬೇಕು. ನಿರ್ಗತಿಕರಿಗೆ ವೈದ್ಯಕೀಯ ನೆರವು ದೊರೆಯಬೇಕು ಎಂಬುದು ನಮ್ಮ ಸಂಘದ ಮುಖ್ಯ ಉದ್ದೇಶವಾಗಿದೆ
ಈ ನಿಟ್ಟಿನಲ್ಲಿ ತಾಲೂಕು ಅಧ್ಯಕ್ಷರಾಗಿ ನೇಮಕ ಆಗುವವರು, ಪ್ರಾಮಾಣಿಕವಾಗಿ ಸಮಾಜಸೇವೆ ಮಾಡಬೇಕು. ಜನಾಂಗದ ಅಭಿವೃದ್ದಿಗೆ ಶ್ರಮಿಸಬೇಕು. ಜಾತಿ, ಧರ್ಮ, ಪಕ್ಷಬೇಧ ಮರೆತು ಸಮಾಜದ ಏಳ್ಗಿಗೆಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ: ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹಿನುದ್ದೀನ್ ಭಂಡಾರಿ, ತಾಲೂಕು ಅಧ್ಯಕ್ಷ ಮಸ್ತಾನ್, ಜಿಲ್ಲಾ ಖಜಾಂಚಿ ಭಾಷುಮಿಯಾ, ಜಿಲ್ಲಾ ಉಪಾಧ್ಯಕ್ಷ ಎಮ್.ಆರ್.ಮಹಿಬೂಬ್ ಪಾಷಾ, ತಾಲೂಕು ಸದಸ್ಯ ಅನ್ವರ್ ಪಾಷಾ, ಸೇರಿದಂತೆ ಅನೇಕರಿದ್ದರು.
