ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರದಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.
ಪಂಡಿತ್ ಜವಾಹರಲಾಲ ನೆಹರು ಅವರ ಭಾವಚಿತ್ರಕ್ಕೆ ಶಾಲಾ ಮಂತ್ರಿಮAಡಲದ ಸದಸ್ಯರು, ಎಸ್.ಡಿ.ಎಮ್.ಸಿ. ಸದಸ್ಯರು ಮಾಲಾರ್ಪಣೆ ಮಾಡಿದರು. ವಿದ್ಯಾರ್ಥಿಗಳು ಪುಷ್ಟನಮನ ಸಲ್ಲಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಮತ್ತು ಅಧಿಕಾರಿಗಳು ಇದೆ ವೇಳೆ ಬಹುಮಾನ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಹೇಳಿಸಲಾಯಿತು.
ಡಯಟ್ ಕಾಲೇಜಿನ ಉಪನ್ಯಾಸಕರಾದ ರಾಜೇಂದ್ರ ಶಾ ಸಸಿಗೆ ನೀರು ಹಾಕಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಲ್ಲಿನ ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದದವರು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಶಾಲಾ ಮುಖ್ಯ ಗುರು ವೀರೇಶ್ ಅಂಗಡಿ ಪ್ರಾಸ್ತಾವಿಕ ಮಾತನಾಡಿ, ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ದೊರೆಯುವ ಶೈಕ್ಷಣಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹಾಗೂ ಎಸ್‌ಎಸ್‌ಎಲ್‌ಸಿ Äವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ ಕೈಗೊಂಡ ಶೈಕ್ಷಣಿಕ ಕಾರ್ಯ ಚಟುವಟಿಕೆ ಕುರಿತು ಮಾತನಾಡಿದರು.
ಶಾಲೆಯ ಕನ್ನಡ ಕಲಾ ಶಿಕ್ಷಕರಾದ ಡಾ. ದಂಡಪ್ಪ ಬಿರಾದಾರ ಮಾತನಾಡಿದರು. ಬಳಿಕ ಮಕ್ಕಳಿಂದ ಆಕರ್ಷಕವಾದ ಹಾಡುಗಳ ನೃತ್ಯ ಕಾರ್ಯಕ್ರಮ ಜರುಗಿದವು. ಎಸ್‌ಡಿಎಂಸಿ ಸದಸ್ಯರಾದ ದಸ್ತಗಿರಿ ಗೋವಿಂದು ತಿಮ್ಮಪ್ಪ, ರವಿಕುಮಾರ್, ಸುನಿತಾ, ಶಾಲಾ ಶಿಕ್ಷಕರಾದ ನಪಿಜ್ ಅಂಜುಮ, ವೀಣಾ ಕುಲಕರ್ಣಿ, ಸಾವಿತ್ರಿ, ಸರಸ್ವತಿ, ಶಿವಲೀಲಾ, ವಿವಿಧ ಗ್ರಾಮಗಳ ವಿದ್ಯಾರ್ಥಿಗಳ ಪಾಲಕರು-ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಸರಸ್ವತಿ ನಿರೂಪಿಸಿದರು. ನೀಲಕಂಠ ನಿರ್ವಹಿಸಿದರು. ಸೂಗಮ ಮತ್ತು ಭಾವನಾ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *