ಕಂಪ್ಲಿ: ಇಲ್ಲಿನ ಪಟ್ಟಣದ ವೀರಶೈವ ಭವನದಲ್ಲಿ ನವೆಂಬರ್ 13ರಂದು ತಾಲ್ಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಷಣ್ಮುಖಪ್ಪ ಚಿತ್ರಗಾರ ತಿಳಿಸಿದ್ದಾರೆ.

*ಅಕ್ಷರ ಜಾತ್ರೆಯ ಸಂಪೂರ್ಣ ವಿವರ*

ಪ್ರಸಿದ್ಧ ಸಾಹಿತಿ ಬಂಗಿ ದೊಡ್ಡ ಮಂಜುನಾಥ ಅವರು ಈ ಬಾರಿಯ ಸಮ್ಮೇಳನದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಲಿದ್ದಾರೆ.

ನ.13ರ ಬೆಳಿಗ್ಗೆ 11 ಗಂಟೆಗೆ ಮಾನ್ಯ ಶಾಸಕರಾದ ಜೆ.ಎನ್. ಗಣೇಶ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 7.30ಕ್ಕೆ ರಾಷ್ಟ್ರಧ್ವಜ, ಪರಿಷತ್ ಧ್ವಜ ಹಾಗೂ ನಾಡಧ್ವಜಗಳ ಆರೋಹಣ ನೆರವೇರಲಿದೆ.

ಬೆಳಿಗ್ಗೆ 8.00 ಗಂಟೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗಿದ್ದು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ಶ್ರೀನಿವಾಸ್ ಅವರು ಚಾಲನೆ ನೀಡಲಿದ್ದಾರೆ. ಸಮ್ಮೇಳನಾಧ್ಯಕ್ಷರ ಮೂರು ಪ್ರಮುಖ ಕೃತಿಗಳ ಬಿಡುಗಡೆ ನೆರವೇರಲಿದೆ.

ನಾಡಿನ ಜ್ವಲಂತ ವಿಷಯಗಳಾದ ರೈತ, ಇತಿಹಾಸ, ಕವಿಗೋಷ್ಠಿ ಹಾಗೂ ಅಂಬೇಡ್ಕರ್ ಚಿಂತನೆಗಳ ಕುರಿತು ವೈವಿಧ್ಯಮಯ ವಿಚಾರಗೋಷ್ಠಿಗಳು ನಡೆಯಲಿವೆ.

ಇದರೊಂದಿಗೆ ಸಾಹಿತ್ಯ, ಸಂಗೀತ ಮತ್ತು ಕರುನಾಡ ಸಂಸ್ಕೃತಿಯನ್ನು ಬಿಂಬಿಸುವ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಕಣ್ಮನ ಸೆಳೆಯಲಿವೆ.

ಕನ್ನಡ ನಾಡು, ನುಡಿ, ಸಂಸ್ಕೃತಿಯ ಈ ಮಹೋತ್ಸವಕ್ಕೆ ತಾಲ್ಲೂಕಿನ ಸಮಸ್ತ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ.

 

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *