ಗ್ರಾಪಂ ಅಧಿಕಾರಿಗಳು ಜನರಿಗೆ ಸ್ಪಂದನೆ ಮಾಡಿ – ಶಾಸಕ ಆರ್. ಬಸನಗೌಡ ತುರ್ವಿಹಾಳ

ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರದ ಅಮೀನಗಡ, ವಟಗಲ್, ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ನೇತೃತ್ವದಲ್ಲಿ ಶಾಸಕರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಂದು ಗ್ರಾಮಗಳ ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅಲ್ಲದೆ ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಕುಡಿಯುವ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನಿವಾರಣೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಮಹಿಬೂಬ್ ಸಾಬ್ ಮುದ್ದಾಪುರ, ಬಲವಂತರಾಯ ವಟಗಲ್, ಭೀಮೇಶ್ ನಾಯಕ್,
ತಹಸೀಲ್ದಾರ್ ಮಂಜುನಾಥ ಭೋಗಾವತಿ,ತಾಲೂಕು ಪಂಚಾಯತ್ ಇಒ ಅಮರೇಶ ಯಾದವ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

ಹಿಲಾಲಪುರ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಮಾಡುವಂತೆ ಶಾಸಕರಿಗೆ ಮನವಿ
ಮಸ್ಕಿ ತಾಲೂಕಿನ ಹಿಲಾಲಪುರ ಗ್ರಾಮಕ್ಕೆ ಇವರೆಗೆ ಬಸ್ ಸೌಕರ್ಯ ಇಲ್ಲ ಇದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ ಆದ್ದರಿಂದ ನಮ್ಮ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಮಾಡುವಂತೆ ಶಾಸಕ ಆರ್. ಬಸನಗೌಡ ತುರ್ವಿಹಾಳ್ ಅವರಿಗೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ತಕ್ಷಣ ಸ್ಪಂದನೆ ಮಾಡಿದ ಶಾಸಕರು ಮಸ್ಕಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿ ಕೊಡಿ ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *