ತಾಂಡವಪುರ ನವಂಬರ್ 11 ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಯ ಗ್ರಾಮದಲ್ಲಿ ಜರುಗಿದ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಾಮಿಯ ಪಲ್ಲಕಿಗೆ ಉತ್ಸವ ಮೆರವಣಿಗೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಪೂಜೆ ಸಲ್ಲಿಸಿ, ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು
ಸಚಿವರು ಬಳಿಕ ಮಾತನಾಡಿ ನಾಡಿನ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಗ್ರಾಮೀಣ ಜನಜೀವನದ ಅವಿಭಾಜ್ಯ ಅಂಗವಾಗಿರುವ ಇಂತಹ ಜಾತ್ರಾ ಮಹೋತ್ಸವಗಳು ನಮ್ಮ ನಂಬಿಕೆ, ಭಕ್ತಿ ಮತ್ತು ಸಾಮುದಾಯಿಕ ಸೌಹಾರ್ದತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಇಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣ ಸಾಂಸ್ಕೃತಿಕ ವೈಭವವನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮಹತ್ವದ ವೇದಿಕೆಗಳಾಗಿವೆ. ಎಂದು ಅಭಿಪ್ರಾಯ ವ್ಯಕ್ತಪಡಿಸಿದರು
ಶ್ರೀ ಸಿದ್ದೇಶ್ವರ ಸ್ವಾಮಿಯ ಕೃಪಾಶೀರ್ವಾದವು ಕಾರ್ಯ ಗ್ರಾಮದ ಜನತೆ ಸೇರಿದಂತೆ ಸಮಸ್ತ ನಾಡಿನ ಜನರಿಗೆ ಸುಖ, ಶಾಂತಿ, ಆರೋಗ್ಯ, ಸಮೃದ್ಧಿ ಕಾಲಕಾಲಕ್ಕೆ ಮಳೆ ಬೆಳೆ ಬೆಳೆದು ರೈತಾಪಿ ವರ್ಗದ ಜನರು ಸೇರಿದಂತೆ ನಾಡಿನ ಜನತೆಗೆ ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು
ಈ ಸಂದರ್ಭದಲ್ಲಿ ಶಾಸಕರಾದ ಎಆರ್ ಕೃಷ್ಣಮೂರ್ತಿ ಮೈಸೂರು ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷರಾದ ಎಸ್.ಸಿ. ಬಸವರಾಜು, ಕಾರ್ಯ ಗ್ರಾಮದ ಮುಖಂಡರು, ಕಾರ್ಯ ಕುಮಾರ್ ಸಿದ್ದಯ್ಯ ಸ್ವಾಮಿ ಪ್ರಕಾಶ್ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕಾಪು ಸಿದ್ವೀರಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಾದ ಕಾರ್ಯ ಬಾಣೂರು ಚಿನಂಬಳ್ಳಿ ತಗಡೂರು ಹನುಮನಪುರ ಚುಂಚನಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳ ಸಾವಿರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು ಹಿರಿಯರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
