ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 3ರ ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದಿಂದ ನಿರ್ಗಮಿಸಿ ಬೆಳಿಗ್ಗೆ 11ಕ್ಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ನಗರಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 1.30ಕ್ಕೆ ಲಿಂಗಸುಗೂರದಿAದ ನಿರ್ಗಮಿಸಿ, ಮಧ್ಯಾಹ್ನ 2 ಗಂಟೆಗೆ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಆಗಮಿಸಿ ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 3.30ಕ್ಕೆ ಹಟ್ಟಿಯಿಂದ ನಿರ್ಗಮಿಸಿ ಲಿಂಗಸೂರಗೆ ತೆರಳಿ ಸಂಜೆ 4 ಗಂಟೆಗೆ ಲಿಂಗಸಗೂರು ಪೊಲೀಸ್ ಠಾಣೆಗೆ ಭೇಟಿ ನೀಡುವರು. ಬಳಿಕ ಲಿಂಗಸುಗೂರಿನ ಸಮಾಜ ಕಲ್ಯಾಣ ಇಲಾಖೆಯ ಪದವಿ ಮಟ್ಟದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಲಿಂಗಸುಗೂರಿನಿಂದ ಸಂಜೆ 6.30ಕ್ಕೆ ನಿರ್ಗಮಿಸಿ ರಾಯಚೂರು ನಗರಕ್ಕೆ ಆಗಮಿಸಿ, ರಾತ್ರಿ 11 ಗಂಟೆಗೆ ರಾಯಚೂರಿನಿಂದ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
