ಕುಷ್ಟಗಿ: ಪಟ್ಟಣದ 8ನೇ ವಾರ್ಡ್‌ನ ಸಂದೀಪ್ ನಗರದಲ್ಲಿ ಕಳೆದ 20ರಿಂದ 30 ವರ್ಷಗಳಿಂದ ಶೆಡ್‌ಗಳು ಹಾಗೂ ತಗಡಿನ ಮನೆಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವಂತೆ ಒತ್ತಾಯಿಸಿ, ಕರವೇ ಸ್ವಾಭಿಮಾನಿ ಸೇನೆಯ ಕುಷ್ಟಗಿ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಮಹಿಳಾ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಹಿಟ್ನಾಳ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಂದೀಪ್ ನಗರದ ನಿವಾಸಿಗಳಿಗೆ ಕೂಡಲೇ ಹಕ್ಕುಪತ್ರ ವಿತರಿಸಿ, ಅವರ ಬಹುಕಾಲದ ಕನಸಾದ ಸ್ವಂತ ಮನೆಗೆ ಕಾನೂನುಬದ್ಧ ಹಕ್ಕು ಕಲ್ಪಿಸಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕಳೆದ ಹಲವು ವರ್ಷಗಳಿಂದ ಬಡ ಕುಟುಂಬಗಳು ಮನೆಗಳ ಹಕ್ಕಿಗಾಗಿ ಕಾಯುತ್ತಿದ್ದು, ಅವರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸುವುದರ ಜೊತೆಗೆ ಸರ್ಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಸಂಘಟನೆ ಹೋರಾಟಕ್ಕೆ ಮುಂದಾಗಿದೆ.

ಬಡವರ ಬದುಕಿಗೆ ಬೆಳಕಾಗುವ ನಿಟ್ಟಿನಲ್ಲಿ ಕರವೇ ಸ್ವಾಭಿಮಾನಿ ಸೇನೆ ನಿರಂತರವಾಗಿ ಜನಪರ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಸಂದೀಪ್ ನಗರದ ನಿವಾಸಿಗಳಿಗೆ ಹಕ್ಕುಪತ್ರ ದೊರೆಯುವವರೆಗೂ ಸಂಘಟನೆಯ ಹೋರಾಟ ಮುಂದುವರಿಯಲಿದೆ ಎಂದು ತಾಲೂಕು ಅಧ್ಯಕ್ಷ ಹನುಮೇಶ ಭೋವಿ ತಿಳಿಸಿದರು.

Leave a Reply

Your email address will not be published. Required fields are marked *