ಕುಷ್ಟಗಿ: 2026-27ನೇ ಸಾಲಿನಲ್ಲಿ ಗ್ರಾಮೀಣ ಭಾಗದ ಬಂಜಾರ, ಲಮಾಣಿ, ಸುಕಾಲಿ ಹಾಗೂ ಸುಗಾಲಿ ಜನಾಂಗದ ರೈತ ಮಹಿಳೆಯರಿಗೆ ಉಚಿತವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸುವ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ ಈ ಯೋಜನೆ ಜಾರಿಗೊಳಿಸಲಾಗಿದ್ದು, ಆಯ್ಕೆಯಾದ ಪ್ರತಿ ಫಲಾನುಭವಿಗೆ ಐದು ವಾರದ 20 ನಾಟಿ ಅಥವಾ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

– ಗ್ರಾಮೀಣ ಭಾಗದ ರೈತ ಮಹಿಳೆಯಾಗಿರಬೇಕು.
– ಬಂಜಾರ, ಲಮಾಣಿ, ಸುಕಾಲಿ ಅಥವಾ ಸುಗಾಲಿ ಜನಾಂಗಕ್ಕೆ ಸೇರಿದವರಾಗಿರಬೇಕು.
– ಜಾತಿ ಪ್ರಮಾಣ ಪತ್ರ ಹೊಂದಿರಬೇಕು.
– ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ ಹೊಂದಿರಬೇಕು.
– ಫ್ರೂಟ್ಸ್ (FRUITS) ಐಡಿ ಕಡ್ಡಾಯವಾಗಿ ಹೊಂದಿರಬೇಕು.
– ಆಧಾರ್ ಕಾರ್ಡ್ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು.

ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕುಷ್ಟಗಿ ತಾಲ್ಲೂಕಿನ ಪಶು ಆಸ್ಪತ್ರೆಯ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಕುಷ್ಟಗಿ ತಾಲ್ಲೂಕಿನ ಅರ್ಹ ರೈತ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *