ಕಂಪ್ಲಿ: ತಾಲ್ಲೂಕಿನ ಮೆಟ್ರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಜೆ.ಎನ್. ಗಣೇಶ್ ಉದ್ಘಾಟಿಸಲಿದ್ದಾರೆ. ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ವಿಷಯ ಕುರಿತು ಸುಭಾಷ್ ಎ. ಗೌಡ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಗ್ರಾಮೀಣ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಕೊಡುಗೆ ಹಾಗೂ ರೈತರಿಗೆ ದೊರೆಯುವ ಕೃಷಿ ಸಾಲ, ಬಿತ್ತನೆ ಬೀಜ, ರಸಗೊಬ್ಬರದಂತಹ ಸೌಲಭ್ಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಗುವುದು. ಜೊತೆಗೆ ಸಹಕಾರ ಸಂಘಟನೆಗಳ ಬಲವರ್ಧನೆ ಕುರಿತು ಚರ್ಚೆ ನಡೆಯಲಿದೆ.
ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಹಕಾರ ಬ್ಯಾಂಕ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರೈತರು, ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಗೌಡ್ರು ದಂಡಿ ಮಹರ್ಷಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *