ತಾಂಡವಪುರ ನವೆಂಬರ್ 13 ಮೈಸೂರಿನಲ್ಲಿ ವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನುಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್‌ಗೆ ಆಗಮಿಸಿದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಹೂಗುಚ್ಚ ನೀಡಿಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು
ಪ್ರಧಾನ ಮಂತ್ರಿಗಳು ಸ್ವಾಗತ ಸ್ವೀಕರಿಸಿ ಅವರು ಕೂಡ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ನಗರಭಿವೃದ್ಧಿ ಸಚಿವರು ಆದ ಡಾಕ್ಟರ್ ಎಸ್ ಯತೇಂದ್ರ ಸಿದ್ದರಾಮಯ್ಯನವರನ್ನು ಆತ್ಮೀಯವಾಗಿ ಅಭಿನಂದಿಸಿದರು
ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯವಾದ ‘COSMOS – Mysuru’ ಲೋಕಾರ್ಪಣೆಗಾಗಿ ಮೈಸೂರಿಗೆ ಆಗಮಿಸಿದ ಪ್ರಧಾನಮಂತ್ರಿಗಳನ್ನು ಸ್ವಾಗತಿಸುವ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ ಜಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ಮುಂತಾದವರು ಹಾಜರಿದ್ದರು.
