ಸಿರವಾರ, ಡಿ.02-
ಸಿರವಾರ ತಾಲೂಕಿನ ಕುರುಕುಂದಾ ಸರ್ಕಾರಿ ಶಾಲೆ ಸೇರಿ ಮಾನ್ವಿ ವಿಧಾನಸಭಾ ಕ್ಷೇತ್ರದ 4 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಪಂಡಳಿಯ ಅನುದಾನದಡಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ ಪತ್ರಿಕೆಗೆ ತಿಳಿಸಿದರು.
ಅವರು ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ ನಮ್ಮ ರಾಜಕೀಯ ಗುರುಗಳಾದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವರಾದ ಎನ್.ಎಸ್.ಬೋಸರಾಜು ಅವರು ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಆಧ್ಯತೆ ನೀಡುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿ ಸಿರವಾರ ತಾಲೂಕಿನ ಕುರಕುಂದ, ಮಾನ್ವಿ ತಾಲೂಕಿನ ಚೀಕಲಪರ್ವಿ, ತಡಕಲ್ ಹಾಗೂ ಮಾನ್ವಿ ನಗರದ ನಮಾಜಗೇರಾ ಗುಡ್ಡ ಶಾಲೆಗಳನ್ನು ಉನ್ನತೀಕರಿಸಿ ಈ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಮೇಲ್ದರ್ಜೆಗೇರಿಸಲಾಗಿದ್ದು ಕ್ಷೇತ್ರದ ಬಡ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಬೇಕೆಂದು ಸಲಹೆ ನೀಡಿದರು.

