ಮಸ್ಕಿ : ರಾಜ್ಯ ಸೇರಿದಂತೆ ರಾಷ್ಟ್ರ ರಾಜಕಾರಣದ ಗಮನ ಸೆಳೆದಿದ್ದ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ದಿಂದ ಗೆದ್ದು ಪಕ್ಷಕ್ಕೆ ಹೊಸ ಚೈತನ್ಯ ತುಂಬಿದ್ದು ಮಸ್ಕಿ ಕ್ಷೇತ್ರ, ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಕ್ಷೆತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ ಪಕ್ಷದ ಹಿತಕ್ಕಾಗಿ ಶ್ರಮಿಸುತ್ತಿರುವ ಶಾಸಕ
ಆರ್.ಬಸನಗೌಡ ತುರ್ವಿಹಾಳ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪುರಸಭೆ ನಾಮನಿರ್ದೇಶನ ಸದಸ್ಯ ಶಬ್ಬೀರ್ ಸಾಬ್ ಚೌದ್ರಿ ಒತ್ತಾಯಿಸಿದರು.
ಮಸ್ಕಿ ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಸ್ಕಿ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು ಮಸ್ಕಿ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿ ಆಗುವ ಜೊತೆಗೆ ಪಕ್ಷ ಸಂಘಟನೆಗೂ ಹೆಚ್ಚಿನ ಮಹತ್ವ ನೀಡಿದಂತಾಗುತ್ತದೆ ಆದ್ದರಿಂದ ರಾಜ್ಯ ಕಾಂಗ್ರೆಸ್ ನಾಯಕರು ಶಾಸಕ ಆರ್ ಬಸನಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು ನಂತರ ಯುವ ಮುಖಂಡ ದುರ್ಗರಾಜ ವಟಗಲ್ ಮಾತನಾಡಿ ಮಸ್ಕಿ ಕ್ಷೇತ್ರವು ಮೀಸಲು ಕ್ಷೇತ್ರವಾಗಿರುವುದರಿಂದ ಇಲ್ಲಿನ ಶಾಸಕರಿಗೆ ಸಚಿವ ಸ್ಥಾನ ನೀಡುವುದರಿಂದ ಈ ಭಾಗ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಅಲ್ಲದೆ ಮಸ್ಕಿ ಕ್ಷೇತ್ರದ ಶಾಸಕರು ಹಗಲಿರುಳು ಎನ್ನದೆ ಪ್ರತಿನಿತ್ಯ ಕ್ಷೇತ್ರ ಸಂಚಾರ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ ಆದ್ದರಿಂದ ಶಾಸಕ ಆರ್ ಬಸನಗೌಡ ತುರುವಿಹಾಳ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಜಿಲ್ಲೆ ಅನುಕೂಲವಾಗಲಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಬಸವರಾಜ ಕೊಠಾರಿ, ಕಾಶಿಮಪ್ಪ ಡಿ ಮುರಾರಿ, ನೂರ್ ಅಹಮದ್ ಸೇರಿದಂತೆ ಇತರರು ಇದ್ದರು
