ತಾಳಿಕೋಟೆ: ಇಂಗಳೇಶ್ವರ ಗ್ರಾಮದಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈಲೇಶ್ವರದ ಬ್ರಿಲಿಯಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಜಗದ್ಗುರು ಶ್ರೀ ರೇವಣಸಿದ್ಧೇಶ್ವರ ಜಾತ್ರಾ ನಿಮಿತ್ಯವಾಗಿ ಶಿಕ್ಷಕರ ಬಳಗದ ವತಿಯಿಂದ ನ.30 ರಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಪ್ರವೇಶ ಪರೀಕ್ಷೆಯಲ್ಲಿ ಜಿಲ್ಲೆಯ ಸುಮಾರು 50 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಬ್ರಿಲಿಯಂಟ್ ಪ್ರೌಢಶಾಲೆ ಮೈಲೇಶ್ವರದ ವಿದ್ಯಾರ್ಥಿಗಳ ಪೈಕಿ 4 ತಂಡಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದವು. ಇವುಗಳಲ್ಲಿ ಬ್ರಿಲಿಯಂಟ್ (ಡಿ) ತಂಡದ ವಿದ್ಯಾರ್ಥಿಗಳು 50 ಕ್ಕೆ 37.5 ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ಸ್ಥಾನಕ್ಕೆ ಭಾಜನರಾದರು.ಅದೇ ರೀತಿ ಡಿಸೆಂಬರ್ 2ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ 10 ತಂಡಗಳ ಪೈಕಿ ಬ್ರಿಲಿಯಂಟ್ ಪ್ರೌಢಶಾಲೆ ಮೈಲೇಶ್ವರದ 4 ತಂಡಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮವಾಗಿ ಬ್ರಿಲಿಯಂಟ್ (ಡಿ) ತಂಡದ ವಿದ್ಯಾರ್ಥಿಗಳು ಈ ರೋಚಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು 15000/- ರೂ. ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು ಮತ್ತು ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮೈಲೇಶ್ವರದ ಮುಖ್ಯ ಗುರುಗಳು ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *