ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಇಲ್ಲಿನ ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ರಾಯಚೂರು, ದೇವದುರ್ಗ, ಮಾನವಿ, ಸಿರವಾರ ಹಾಗೂ ಅರಕೇರಾ ತಾಲ್ಲೂಕಿನಲ್ಲಿ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ (ಡಿಎಜೆಜಿಯುಎ)ದಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭಿಯಾನದಡಿ ಬುಡಕಟ್ಟು ಸಮುದಾಯದ ಪರಿಶಿಷ್ಟ ಪಂಗಡದ (ಎಸ್‌ಟಿ) ವರ್ಗದವರಿಗೆ ಮಾತ್ರ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಖರೀದಿ ಮತ್ತು ಜೀವಂತ ಮೀನು ಮಾರಾಟ ಮಳಿಗೆ ಕೇಂದ್ರಗಳನ್ನು ಸ್ಥಾಪಿಸಲು ನಿಗದಿತ ಗುರಿಗಳನ್ವಯ ಕೇಂದ್ರ ಸPðರವು ನೀಡಿರುವ ಪಟ್ಟಿಯಲ್ಲಿರುವ ಗ್ರಾಮಗಳಿಗೆ ಮಾತ್ರ ಸೀಮಿತಗೊಳಿಸಿ ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಆಸಕ್ತರು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯಚೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ: 8050196667ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *