ಬೆಂಗಳೂರು: ಶ್ರೀ ಬಸವ ಸೇವಾ ಪ್ರತಿಷ್ಠಾನ ಹಾಗೂ ಸುದ್ದಿಮೂಲ ದಿನಪತ್ರಿಕೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜನೆಗೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಸುದ್ದಿಮೂಲ ಪತ್ರಿಕೆಯ ಸಂಪಾದಕರಾದ ಶ್ರೀ ಬಸವರಾಜ ಸ್ವಾಮಿ ಅವರ ಸಂಪಾದಕತ್ವದ 9 ಸಂಪುಟಗಳ ‘ಬಸವಗೀತೆ’ ಪುಸ್ತಕವನ್ನು ಲೋಕಾರ್ಪಣೆ ಗೊಳಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ ಎಸ್ ಬೋಸರಾಜು ಅವರು.
ಕಾರ್ಯಕ್ರಮದಲ್ಲಿ, ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಶ್ರೀ ಪ್ರೊ.ಮಲ್ಲೆಪುರಂ ಜಿ. ವೆಂಕಟೇಶ್, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರು, ಆದ್ಯಾತ್ಮಿಕ ಚಿಂತಕರಾದ ಶ್ರೀ ಲಕ್ಷ್ಮೀಶ ತೋಳ್ಪಾಡಿ, ಸುದ್ದಿಮೂಲ ಸಹ ಸಂಪಾದಕರಾದ ಶ್ರೀ ವಿಶ್ವನಾಥ, ಶ್ರೀ ದೊಡ್ಡಬಸ್ಸಪ್ಪ ಗೌಡ ಸೇರಿದಂತೆ ಅನೇಕ ಸಾಹಿತಿಗಳು, ಲೇಖಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *