ದೇವದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರರವರ ಅನುಮೋದನೆ ಮೇರೆಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್.ಧರ್ಮಸೇನಾ ಅವರ ಆದೇಶ ಮೇರೆಗೆ ರಾಮಣ್ಣ ಇರಬಗೇರಾ ಅವರ ಶಿಫಾರಸ್ಸಿನ ಮೇರೆಗೆ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಪ್ರದಾನ ಕಾರ್ಯದರ್ಶಿಯಾಗಿ ರಾಜಪ್ಪ ಸಿಂಗ್ರಿ ಗಬ್ಬೂರು ಇವರನ್ನ ನೇಮಕ ಮಾಡಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್ ಭೋಸರಾಜ ಅವರು ರಾಮಣ್ಣ ಇರಬಗೇರಾ ಹಾಗೂ ರಾಜಶೇಖರ ನಾಯಕ ಅವರು ಆದೇಶ ಪತ್ರವನ್ನು ನೀಡಿದರು.
ಇಂದಿನಿಂದ ಪಕ್ಷದ ಸಂಘಟನೆಯಲ್ಲಿ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ತಾವು ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಬರುವ ಬೂತ್ ಮಟ್ಟದ ಮತ್ತು ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೂತನ ಜವಾಬ್ದಾರಿಯಂತೆ ತಕ್ಷಣವೇ ಕಾರ್ಯ ಪ್ರವೃತ್ತರಾಗಾಗಿ ಪಕ್ಷವನ್ನು ಪರಿಶಿಷ್ಟ ಜಾತಿ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
