ಸಿಂಧನೂರು: 2025-26ನೇ ಸಾಲಿನ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಿಂಧನೂರು ಯೋಜನಾ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಂಧನೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರಿಗೆ, ಉದ್ಯೋಗಿನಿ ಯೋಜನೆಯಡಿ ಸಹಾಯಧನ ಮತ್ತು ಬ್ಯಾಂಕಿನ ಮುಖಾಂತರ ಸಾಲವನ್ನು ಒದಗಿಸಿ ಕೊಟ್ಟು ಸ್ವಯಂ ಉದ್ಯೋಗಿಗಳಾಗಲು ಮಹಿಳಾ ಅಭಿವೃದ್ಧಿ ನಿಗಮದಡಿಯಲ್ಲಿ ಉದ್ಯೋಗಿನಿ ಯೋಜನೆ, ಚೇತನ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಯೋಜನೆಯಡಿ ಸೌಲಭ್ಯ ಆರ್ಜಿ ಸಲ್ಲಿಸುವ ಸೇವಾಸಿಂಧು ಪೋರ್ಟಲ್ https://sevasindhu.kar- nataka.gov.in ನಲ್ಲಿ ಹಾಗೂ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳ ಮೂಲಕ ಆನ್‌ಲೈನ್ ಮೂಲಕ ಡಿಸೆಂಬರ್ 15 ರೂಳಗಾಗಿ ಸಿಂಧನೂರು ಯೋಜನಾ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೆಶಕರು ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಹಾಗೂ ರಾಯಚೂರು ಕಚೇರಿ ದೂರವಾಣಿ ಸಂಖ್ಯೆ:
9663192117ಗೆ ಸಂಪರ್ಕಿಸಬಹುದು ಎಂದು ಸಿಂಧನೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
