ಮಸ್ಕಿ: ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಮುಂದಿನ ಗ್ರಾ.ಪಂ, ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಎದುರಿಸಬೇಕೆಂದು ಶಾಸಕ ಆರ್.ಬಸನಗೌಡ ತುರವಿಹಾಳ ಹೇಳಿದರು.
ಮಸ್ಕಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಿವಿಧ ಘಟಕಗಳ ಪದಾಧಿಕಾರಿಗಳ ನೇಕಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸುಧೀರ್ಘ ಇತಿಹಾಸವಿದೆ. ಪಕ್ಷ ಸಮುದ್ರವಿದ್ದಂತೆ. ಪಕ್ಷದ ಕಾರ್ಯಕರ್ತರು ಅಧಿಕಾರ ಸಿಕ್ಕಿಲ್ಲವೆಂದು ಬೇಸರಪಟ್ಟುಕೊಳ್ಳದೆ ಮುಂದಿನ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕೆಂದು ಹೇಳಿದರು.
ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿ ಅಧಿಕಾರಕ್ಕೆ ಬರುವ ಮುನ್ನಾ ಘೋಷಣೆ ಮಾಡಿದಂತಹ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿಗೊಳಿಸಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕ್ಷೇತ್ರದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ತುಂಬಿಸಲು ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಿಸಲಾಗಿದೆ. ನೂತನ ಅಧ್ಯಕ್ಷರುಗಳು ಪಕ್ಷದ ಕಾರ್ಯಕರ್ತರ ಜತೆಗೂಡಿ ಮುಂಬರುವ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮನೆಗೆ ತೆರಳಿ ಪ್ರತಿಯೊಬ್ಬರಿಗೆ ತಿಳಿಸುವ ಕೆಲಸವಾಗಬೇಕಾಗಿದೆ ಎಂದು ಹೇಳಿದರು.

ವಿವಿಧ ಘಟಕಗಳಿಗೆ ನೇಮಕ: ಪರಿಶಿಷ್ಟ ಜಾತಿ ವಿಭಾಗದ ನಗರ ಘಟಕದ ಅಧ್ಯಕ್ಷರಾಗಿ ಬಸಪ್ಪ ಜಂಗಮರಹಳ್ಳಿ, ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಸೋಮನಾಥ ತುರವಿಹಾಳ, ಎಸ್‌ಟಿ ಘಟಕದ ನಗರ ಅಧ್ಯಕ್ಷರಾಗಿ ರಮೇಶ ಕಾಸ್ಲಿ, ಗ್ರಾಮೀಣ ಘಟಕದ ಯಂಕೋಬ ಕನ್ನಟಗಿ, ಪ್ರಚಾರ ಸಮಿತಿಯ ನಗರ ಘಟಕದ ಅಧ್ಯಕ್ಷರಾಗಿ ಜಯಪ್ಪ ಮೆದಿಕಿನಾಳ, ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಸಂಜಯಕುಮಾರ ಬಳಗಾನೂರ ಇವರುಗಳನ್ನು ನೇಮಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರುಗಳಾದ ಅಂದಾನಪ್ಪ ಗುಂಡಳ್ಳಿ, ಆದನಗೌಡ ಸಂತೆಕೆಲ್ಲೂರು, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಹಿಬೂಬ ಸಾಬ ಮುದ್ದಾಪೂರು, ಕೆಪಿಸಿಸಿ ಸದಸ್ಯರಾದ ಸಿದ್ಧನಗೌಡ ಮಾಟೂರು, ಅಲ್ಪಸಂಖ್ಯಾತರ ವಿಭಾಗದ ನಗರ ಘಟಕದ ಅಧ್ಯಕ್ಷ ನಿಸ್ಸಾರ ಅಹ್ಮದ್, ಗ್ರಾಮೀಣ ಘಟಕದ ಅಧ್ಯಕ್ಷ ಹುಸೇನ್ ಭಾಷಾ ಬಳಗಾನೂರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿದ್ದರು

Leave a Reply

Your email address will not be published. Required fields are marked *