ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿಗೆ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಇಲಾಖೆಯ ವೆಬ್‌ಸ್ಶೆಟ್ ವಿಳಾಸ: www.twd.karnataka.gov.in ರಡಿಯ ಸ್ಟಿಪೆಚಿಡ್ ಟು ಲಾ ಗ್ರಾಯಜ್ಯುಯೇಟ್ಸ್ (Stipend to LAW Graduates) ಲಿಂಕ್‌ನಲ್ಲಿ ಡಿಸೆಂಬರ್ 19ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಅಥವಾ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ರಾಯಚೂರು ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವಮಾನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *