ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಪಿಎಮ್‌ಎನ್‌ಎಎಮ್ ಯೋಜನೆಯಡಿಯಲ್ಲಿ ಶಿಕ್ಷಣ ಮೇಳವನ್ನು ಮಾನವಿ ಪಟ್ಟಣದ ಬಸವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಈ ಶಿಕ್ಷಣ ಮೇಳದಲ್ಲಿ ವಿವಿಧ ಉದ್ದಿಮೆಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಶಿಕ್ಷಣ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳುತ್ತಿರುವುದರಿಂದ ಐಟಿಐ ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಈಗಾಗಲೇ ಐಟಿಐ ಉತ್ತೀರ್ಣರಾದ ತರಬೇತಿದಾರರು ಮತ್ತು ಪಿಯುಸಿ ಹಾಗೂ ಪದವಿಯಲ್ಲಿ ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *