ತಾಳಿಕೋಟಿ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ಇಂದು ನಡೆಯಲಿವೆ. ತಾಳಿಕೋಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೆಳಿಗ್ಗೆ 10-30 ಘಂಟೆಗೆ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ಸರ್ಕಾರದಿಂದ ಮಾನ್ಯತೆ ಹೊಂದಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಭಾಗವಹಿಸಲು ಅರ್ಹರಾಗಿರುತ್ತಾರೆ. ಸದರಿ ಕಾರ್ಯಕ್ರಮದಲ್ಲಿ ಭಕ್ತಿಗೀತೆ, ಆಶುಭಾಷಣ (ಕನ್ನಡ ಮಾಧ್ಯಮದಲ್ಲಿ ಮಾತ್ರ), ಪ್ರಬಂಧ ಸ್ಪರ್ಧೆ (ಕನ್ನಡ ಮಾಧ್ಯಮದಲ್ಲಿ ಮಾತ್ರ), ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ (ಸಾಮಾನ್ಯ ಜ್ಞಾನ), ರಸಪ್ರಶ್ನೆ (ವಿಜ್ಞಾನ)ಈ ಎಲ್ಲ ವಿಷಯಗಳಿಗೆ ಸಂಬಂಧಿಸಿದ ಸ್ಪರ್ಧೆಗಳು ಇರುತ್ತವೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲ ಶಿಕ್ಷಕರು ನಿಗಧಿತ ಸಮಯಕ್ಕೆ ಕಾರ್ಯಕ್ರಮ ಸ್ಥಳದಲ್ಲಿ ಹಾಜರಿದ್ದು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ಶಿಕ್ಷಣ ಸಂಯೋಜಕ, ನೋಡಲ್ ಅಧಿಕಾರಿ ಎಂ.ಕೆ.ಬಾಗಬಾನ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
